Featured

ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಆಸ್ಟ್ರೇಲಿಯಾ ಆಟಗಾರ – vishwanews24

ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಆಸ್ಟ್ರೇಲಿಯಾ ಆಟಗಾರ

ಅಹಮದಾಬಾದ್ : ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ವಿಶ್ವಕಪ್ ನಲ್ಲಿ ಆಸ್ಟ್ರೇಲಿಯಾ ತಂಡವು ಭಾರತ ತಂಡವನ್ನು ಮಣಿಸುವ ಮೂಲಕ ವಿಶ್ವಕಪ್‌ ಗೆದ್ದು, ಕ್ರಿಕೆಟ್‌ ಜಗತ್ತಿನಲ್ಲಿ ಬಲಿಷ್ಠ ತಂಡವಾಗಿ ಹೊರ ಹೊಮ್ಮಿದೆ. ಈ ಎಲ್ಲದರ ನಡುವೆಯೇ ವಿಶ್ವಕಪ್‌ ಗೆದ್ದ ಆಸ್ಟ್ರೇಲಿಯಾ ತಂಡದ ಆಟಗಾರನೋರ್ವನ ವಿರುದ್ಧ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಆಸ್ಟ್ರೇಲಿಯಾ ಆಟಗಾರ ಮಿಚೆಲ್‌ ಮಾರ್ಷ್‌ ವಿಶ್ವಕಪ್‌ ಟ್ರೋಫಿ ಮೇಲೆ ಕಾಲಿಟ್ಟು ಸಂಭ್ರಮಿಸುತ್ತಿದ್ದು, ಟ್ರೋಫಿ ಗೆದ್ದ ಕೆಲವೇ ಗಂಟೆಗಳ ನಂತರ ಈ ಚಿತ್ರವನ್ನು ಹಂಚಿಕೊಳ್ಳಲಾಗಿದೆ. ಈ ಫೋಟೋವನ್ನು ಆರಂಭದಲ್ಲಿ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್ ಅವರು ತಮ್ಮ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಂತರ ಕಮ್ಮಿನ್ಸ್ ಫೋಟೋ ಶೇರ್ ಮಾಡುತ್ತಿದ್ದಂತೆಯೇ ಇದು ಭಾರೀ ವೈರಲ್ ಆಗಿದ್ದು, ಟ್ರೋಫಿಗೆ ಅಗೌರವ ಸೂಚಿಸಿರುವ ಆಟಗಾರನ ವಿರುದ್ಧ ಕ್ರಿಕೆಟ್‌ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಇನ್ನು ಈ ಟ್ರೋಫಿಗಾಗಿ ಸಾಕಷ್ಟು ದೇಶಗಳು ಶ್ರಮಪಟ್ಟು ಆಟವಾಡಿವೆ, ಹಾಗೂ ಕೋಟ್ಯಂತರ ಜನರು ಈ ಫೈನಲ್ ಪಂದ್ಯಾವಳಿಯನ್ನು ಕಾತುರದಿಂದ ವೀಕ್ಷಿಸುತ್ತಿದ್ದರು. ಆದರೆ ಈಗ ಆಸ್ಟ್ರೇಲಿಯಾ ಆಟಗಾರ ಕಪ್‌ ಮೇಲೆ ಕಾಲಿಟ್ಟು ಕುಳಿತಿರುವುದು ದುರಂಕಾರದ ವಿಷಯ ಎಂದು ಆಕ್ರೋಶ ವ್ಯಕ್ತವಾಗಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

18 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

18 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

19 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

19 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

19 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

21 hours ago