Featured

ವಿಶ್ವದ ಜನಪ್ರಿಯ ನಾಯಕರಾಗಿ ಹೊರ ಹೊಮ್ಮಿದ ಪ್ರಧಾನಿ ನರೇಂದ್ರ ಮೋದಿ -Vishwanews24

ವಿಶ್ವದ ಜನಪ್ರಿಯ ನಾಯಕರಾಗಿ ಹೊರ ಹೊಮ್ಮಿದ ಪ್ರಧಾನಿ ನರೇಂದ್ರ ಮೋದಿ -Vishwanews24

ಕೊರೊನಾ ಬಿಕ್ಕಟ್ಟು ಅತ್ಯಂತ ಯಶಸ್ವಿ ನಿರ್ವಹಣೆ..

ನವದೆಹಲಿ: ಅಮೇರಿಕಾದ ಕಂಪನಿಯೊಂದು ವಿಶ್ವದ ನಾಯಕರ ಜನಪ್ರಿಯತೆಗೆ ಸಂಬಂಧಿಸಿದಂತೆ ನಡೆಸಿದ ಸಮೀಕ್ಷೆಯಲ್ಲಿ ಜಾಗತಿಕ ಮಟ್ಟದ ಇತರೆ ನಾಯಕರಿಗಿಂತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉತ್ತಮ ರೇಟಿಂಗ್ ಬಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ನಡ್ಡಾ, “ಬೇರೆ ದೇಶಗಳಿಗೆ ಹೋಲಿಸಿದರೆ ಕೊರೊನಾ ಬಿಕ್ಕಟ್ಟನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿರುವುದು ಸೇರಿದಂತೆ ಹಲವು ವಿಷಯಗಳಲ್ಲಿ ಅವರು ವಿಶ್ವದ ಜನಪ್ರಿಯ ನಾಯಕರಾಗಿ ಹೊರ ಹೊಮ್ಮಿದ್ದಾರೆ” ಎಂದರು.

“ಮೋದಿ ಅವರು ದೇಶದ ಎಲ್ಲಾ ಕ್ಷೇತ್ರಗಳಲ್ಲೂ ಜನಪ್ರಿಯ ನಾಯಕರಾಗಿದ್ದಾರೆ, ಅವರಲ್ಲಿರುವ ಸಮರ್ಪಣಾ ಮನೋಭಾವದಿಂದಾಗಿಯೇ ಅವರು ಈ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ಅಮೇರಿಕಾದ ಕಂಪನಿ ಮಾರ್ನಿಂಗ್ ಕನ್ಸಲ್ಟ್‌, ವಿಶ್ವದ ನಾಯಕರ ಕುರಿತು ನಿರಂತರವಾಗಿ ಸಮೀಕ್ಷೆ ನಡೆಸುತ್ತಿದ್ದು, ಈ ಬಾರಿಯ ಸಮೀಕ್ಷೆಯಲ್ಲಿ ಶೇ 75ರಷ್ಟು ಮಂದಿ ಮೋದಿ ಅವರ ಕಾರ್ಯನಿರ್ವಹಣೆ ಮತ್ತು ನಾಯಕತ್ವದ ಬಗ್ಗೆ ಒಲವು ತೋರಿದ್ದು, ಶೇ 25ರಷ್ಟು ಮಂದಿ ಅವರ ನಾಯಕತ್ವವನ್ನು ಇಷ್ಟಪಟ್ಟಿಲ್ಲ. ಇದು ವಿಶ್ವದ ಬೇರೆ ಬೇರೆ ದೇಶದ ನಾಯಕರಿಗೆ ದೊರೆತಿರುವ ರೇಟಿಂಗ್‌ಗಿಂತ ಹೆಚ್ಚಿದೆ ಎಂದು ಸಮೀಕ್ಷೆ ತಿಳಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago