ವಿಶ್ವದ 100 ಶಕ್ತಿಶಾಲಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್ -Vishwanews24

ನ್ಯೂಯಾರ್ಕ್: ವಿಶ್ವದ 100 ಶಕ್ತಿಶಾಲಿ ಮಹಿಳೆಯರಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಒಬ್ಬರೀಂದು ಖ್ಯಾತ ನಿಯತಕಾಲಿಕೆ ಫೋರ್ಬ್ಸ್‌ ಪಟ್ಟಿ ಹೇಳಿದೆ.  ಫೋರ್ಬ್ಸ್‌ ವಿಶ್ವದ 100 ಶಕ್ತಿಶಾಲಿ ಮಹಿಳೆಯರಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ಎಚ್‌ಸಿಎಲ್ ಕಾರ್ಪೊರೇಶನ್ ಸಿಇಒ ಮತ್ತು ಕಾರ್ಯನಿರ್ವಾಹಕ ನಿರ್ದೇಶಕಿ ರೋಶನಿ ನಾಡರ್ ಮಲ್ಹೋತ್ರಾ ಮತ್ತು ಬಯೋಕಾನ್ ಸಂಸ್ಥಾಪಕಿ  ಕಿರಣ್ ಮಜುಂದಾರ್ ಶಾ ಇದ್ದಾರೆ.

ಫೋರ್ಬ್ಸ್ 2019 ರ “ವಿಶ್ವದ 100 ಅತ್ಯಂತ ಶಕ್ತಿಶಾಲಿ ಮಹಿಳೆಯರ” ಪಟ್ಟಿಯಲ್ಲಿ ಜರ್ಮನ್ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಅಗ್ರಸ್ಥಾನದಲ್ಲಿದ್ದರೆ, ಯುರೋಪಿಯನ್ ಸೆಂಟ್ರಲ್ ಬ್ಯಾಂಕ್ ಅಧ್ಯಕ್ಷೆ ಕ್ರಿಸ್ಟೀನ್ ಲಾಗಾರ್ಡ್ ಎರಡನೇ ಸ್ಥಾನದಲ್ಲಿದ್ದಾರೆ ಮತ್ತು ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ  ತೃತೀಯ ಸ್ಥಾನದಲ್ಲಿದ್ದಾರೆ.

ಪಟ್ಟಿಯಲ್ಲಿ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ (29) ಸಹ ಇದ್ದು “2019 ರಲ್ಲಿ, ವಿಶ್ವದಾದ್ಯಂತ ಮಹಿಳೆಯರು ಸರ್ಕಾರ, ವ್ಯವಹಾರ, ಲೋಕೋಪಕಾರ ಮತ್ತು ಮಾಧ್ಯಮಗಳಲ್ಲಿ ಮುಖ್ಯ ಸ್ಥಾನಗಳನ್ನು ಪಡೆದುಕೊಂಡುಉತ್ತಮ ಸಾಧನೆ ಮಾಡುತ್ತಿದ್ದಾರೆ” ಎಂದು ಫೋರ್ಬ್ಸ್ ಹೇಳಿದೆ.

ಫೋರ್ಬ್ಸ್ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾಗಿರುವ ಸೀತಾರಾಮನ್ 34 ನೇ ಸ್ಥಾನದಲ್ಲಿದ್ದಾರೆ. ಇವರು ಪಟ್ಟಿಯಲ್ಲಿರುವ ಭಾರತೀಯರ ಪೈಕಿ ಮೊದಲಿಗರಾಗಿದ್ದಾರೆ. ಭಾರತದ ಮೊದಲ ಮಹಿಳಾ ಹಣಕಾಸು ಸಚಿವೆಯಾಗಿರುವ ಸೀತಾರಾಮನ್ ದೇಶದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಇನ್ನು  ನಾಡರ್ ಮಲ್ಹೋತ್ರಾ (54), ಕಿರಣ್ ಮಜುಂದಾರ್ ಶಾ(65) ಸ್ಥಾನದಲ್ಲಿದ್ದಾರೆ. ಮಲ್ಹೋತ್ರಾ ಎಚ್‌ಸಿಎಲ್ ಕಾರ್ಪೊರೇಶನ್‌ನ ಸಿಇಒ ಆಗಿ, 8.9 ಬಿಲಿಯನ್ ಯುಎಸ್ಡಿ ತಂತ್ರಜ್ಞಾನ ಕಂಪನಿಯ ಎಲ್ಲಾ ಕಾರ್ಯತಂತ್ರದ ಭಾಗವಾಗಿ ದುಡಿಯುತ್ತಿದ್ದರೆ ಮಜುಂದಾರ್ ಶಾಭಾರತದ ಅತ್ಯಂತ ಶ್ರೀಮಂತ ಸ್ವಂತ ಉದ್ಯಮ ನಡೆಸುವ ಮಹಿಳೆ ಮತ್ತು 1978 ರಲ್ಲಿ ದೇಶದ ಅತಿದೊಡ್ಡ ಜೈವಿಕ ಔಷಧೀಯ  ಸಂಸ್ಥೆ ಬಯೋಕಾನ್ ಸ್ಥಾಪನೆ ಮಾಡಿದ್ದವರು ಎನ್ನುವುದು ಗಮನೀಯ ಅಂಶ.

ಉಳಿದಂತೆ ಫೋರ್ಬ್ಸ್ ಪಟ್ಟಿಯಲ್ಲಿ ಬಿಲ್ & ಮೆಲಿಂಡಾ ಗೇಟ್ಸ್ ಫೌಂಡೇಶನ್‌ನ ಸಹ-ಅಧ್ಯಕ್ಷ ಮೆಲಿಂಡಾ ಗೇಟ್ಸ್ (6), ಐಬಿಎಂ ಸಿಇಒ ಗಿನ್ನಿ ರೊಮೆಟ್ಟಿ (9), ಫೇಸ್‌ಬುಕ್ ಸಿಒಒ ಶೆರಿಲ್ ಸ್ಯಾಂಡ್‌ಬರ್ಗ್ (18), ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ (38), ಮೊದಲ ಮಗಳು ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಲಹೆಗಾರ ಇವಾಂಕಾ ಟ್ರಂಪ್ (42), ಗಾಯಕರಾದ ರಿಹಾನ್ನಾ (61), ಬೆಯೋನ್ಸ್ (66) ಮತ್ತು ಟೇಲರ್ ಸ್ವಿಫ್ಟ್ (71), ಟೆನಿಸ್ ತಾರೆ ಸೆರೆನಾ ವಿಲಿಯಮ್ಸ್ (81) ಮತ್ತು ಯುವ ಹವಾಮಾನ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್ (100). ಸ್ಥಾನ ಗಳಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago