ನ್ಯೂಯಾರ್ಕ್: ವಿಶ್ವದ 100 ಶಕ್ತಿಶಾಲಿ ಮಹಿಳೆಯರಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಒಬ್ಬರೀಂದು ಖ್ಯಾತ ನಿಯತಕಾಲಿಕೆ ಫೋರ್ಬ್ಸ್ ಪಟ್ಟಿ ಹೇಳಿದೆ. ಫೋರ್ಬ್ಸ್ ವಿಶ್ವದ 100 ಶಕ್ತಿಶಾಲಿ ಮಹಿಳೆಯರಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ಎಚ್‌ಸಿಎಲ್ ಕಾರ್ಪೊರೇಶನ್ ಸಿಇಒ ಮತ್ತು ಕಾರ್ಯನಿರ್ವಾಹಕ ನಿರ್ದೇಶಕಿ ರೋಶನಿ ನಾಡರ್ ಮಲ್ಹೋತ್ರಾ ಮತ್ತು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ಇದ್ದಾರೆ.
ಫೋರ್ಬ್ಸ್ 2019 ರ “ವಿಶ್ವದ 100 ಅತ್ಯಂತ ಶಕ್ತಿಶಾಲಿ ಮಹಿಳೆಯರ” ಪಟ್ಟಿಯಲ್ಲಿ ಜರ್ಮನ್ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಅಗ್ರಸ್ಥಾನದಲ್ಲಿದ್ದರೆ, ಯುರೋಪಿಯನ್ ಸೆಂಟ್ರಲ್ ಬ್ಯಾಂಕ್ ಅಧ್ಯಕ್ಷೆ ಕ್ರಿಸ್ಟೀನ್ ಲಾಗಾರ್ಡ್ ಎರಡನೇ ಸ್ಥಾನದಲ್ಲಿದ್ದಾರೆ ಮತ್ತು ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ತೃತೀಯ ಸ್ಥಾನದಲ್ಲಿದ್ದಾರೆ.
ಫೋರ್ಬ್ಸ್ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾಗಿರುವ ಸೀತಾರಾಮನ್ 34 ನೇ ಸ್ಥಾನದಲ್ಲಿದ್ದಾರೆ. ಇವರು ಪಟ್ಟಿಯಲ್ಲಿರುವ ಭಾರತೀಯರ ಪೈಕಿ ಮೊದಲಿಗರಾಗಿದ್ದಾರೆ. ಭಾರತದ ಮೊದಲ ಮಹಿಳಾ ಹಣಕಾಸು ಸಚಿವೆಯಾಗಿರುವ ಸೀತಾರಾಮನ್ ದೇಶದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಇನ್ನು ನಾಡರ್ ಮಲ್ಹೋತ್ರಾ (54), ಕಿರಣ್ ಮಜುಂದಾರ್ ಶಾ(65) ಸ್ಥಾನದಲ್ಲಿದ್ದಾರೆ. ಮಲ್ಹೋತ್ರಾ ಎಚ್‌ಸಿಎಲ್ ಕಾರ್ಪೊರೇಶನ್‌ನ ಸಿಇಒ ಆಗಿ, 8.9 ಬಿಲಿಯನ್ ಯುಎಸ್ಡಿ ತಂತ್ರಜ್ಞಾನ ಕಂಪನಿಯ ಎಲ್ಲಾ ಕಾರ್ಯತಂತ್ರದ ಭಾಗವಾಗಿ ದುಡಿಯುತ್ತಿದ್ದರೆ ಮಜುಂದಾರ್ ಶಾಭಾರತದ ಅತ್ಯಂತ ಶ್ರೀಮಂತ ಸ್ವಂತ ಉದ್ಯಮ ನಡೆಸುವ ಮಹಿಳೆ ಮತ್ತು 1978 ರಲ್ಲಿ ದೇಶದ ಅತಿದೊಡ್ಡ ಜೈವಿಕ ಔಷಧೀಯ ಸಂಸ್ಥೆ ಬಯೋಕಾನ್ ಸ್ಥಾಪನೆ ಮಾಡಿದ್ದವರು ಎನ್ನುವುದು ಗಮನೀಯ ಅಂಶ.
ಉಳಿದಂತೆ ಫೋರ್ಬ್ಸ್ ಪಟ್ಟಿಯಲ್ಲಿ ಬಿಲ್ & ಮೆಲಿಂಡಾ ಗೇಟ್ಸ್ ಫೌಂಡೇಶನ್‌ನ ಸಹ-ಅಧ್ಯಕ್ಷ ಮೆಲಿಂಡಾ ಗೇಟ್ಸ್ (6), ಐಬಿಎಂ ಸಿಇಒ ಗಿನ್ನಿ ರೊಮೆಟ್ಟಿ (9), ಫೇಸ್‌ಬುಕ್ ಸಿಒಒ ಶೆರಿಲ್ ಸ್ಯಾಂಡ್‌ಬರ್ಗ್ (18), ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ (38), ಮೊದಲ ಮಗಳು ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಲಹೆಗಾರ ಇವಾಂಕಾ ಟ್ರಂಪ್ (42), ಗಾಯಕರಾದ ರಿಹಾನ್ನಾ (61), ಬೆಯೋನ್ಸ್ (66) ಮತ್ತು ಟೇಲರ್ ಸ್ವಿಫ್ಟ್ (71), ಟೆನಿಸ್ ತಾರೆ ಸೆರೆನಾ ವಿಲಿಯಮ್ಸ್ (81) ಮತ್ತು ಯುವ ಹವಾಮಾನ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್ (100). ಸ್ಥಾನ ಗಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…