Featured

ವಿಶ್ವನಾಥ್ ಪಕ್ಷಕ್ಕೆ ಕಾರ್ಕೋಟ ವಿಷ ಹಾಕಿದ್ದಾರೆ, ಅದನ್ನೆಲ್ಲ ಜೀರ್ಣಿಸಿಕೊಳ್ಳುವ ಶಕ್ತಿ ನಮ್ಮ ಪಕ್ಷಕ್ಕೆ ಇದೆ :ಸಚಿವ ಸಾ.ರಾ ಮಹೇಶ್ -Vishwanews24

ಮೈಸೂರು: ಎಚ್.ವಿಶ್ವನಾಥ್ ರಾಜಕಾರಣದ ವ್ಯಭಿಚಾರಿ. ಆಮಿಷಕ್ಕೊಳಗಾಗಿ ಪಕ್ಷ ಬದಲಿಸುವುದು ರಾಜಕಾರಣದ ವ್ಯಭಿಚಾರ” ಎಂದು ಅನರ್ಹ ಶಾಸಕ ಎಚ್. ವಿಶ್ವನಾಥ್ ವಿರುದ್ಧ ಮಾಜಿ ಸಚಿವ ಸಾ.ರಾ ಮಹೇಶ್ ವಾಗ್ದಾಳಿ ನಡೆಸಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿಶ್ವನಾಥ್ ಅವರನ್ನು ನಾನೇ ಜೆಡಿಎಸ್ ‍ಗೆ ಕರೆ ತಂದು ನಮ್ಮ ಪಕ್ಷಕ್ಕೆ ವಿಷ ಹಾಕಿಬಿಟ್ಟೆ. ಸದನದಲ್ಲಿ ನಾನು ಅವರ ವಿರುದ್ಧ ಮಾತಾಡಿದ್ದಕ್ಕೆ ಈಗಲೂ ಬದ್ಧನಾಗಿದ್ದೇನೆ. ಅವರ ಜೊತೆ ಚರ್ಚೆಗೆ ಬರಲು, ದೇವಸ್ಥಾನಕ್ಕೆ ಹೋಗಲು ನಾನು ಸದಾ ಸಿದ್ಧ. ಅವರ ಜೊತೆಯೇ ಕೂತು ಅವರ ಇನ್ನಷ್ಟು ಚರಿತ್ರೆ ಬಿಚ್ಚಿಡುತ್ತೇನೆ.

ಹಕ್ಕಿ ಒಂದೊಂದು ಋತುವಿನಲ್ಲಿ ಒಂದೊಂದು ಗೂಡು ಸೇರುತ್ತದೆ. ಒಂದು ಋತುವಿನಲ್ಲಿ ವಲಸೆ ಹೋಗುತ್ತದೆ.ಲಾಭ ಎಲ್ಲಿರುತ್ತೋ ಅಲ್ಲಿಗೆ ವಲಸೆ ಹೋಗುತ್ತದೆ. ಹಾಗೇ ಹಳ್ಳಿಹಕ್ಕಿ ಎಚ್.ವಿಶ್ವನಾಥ್ ಕೂಡ ಎಂದರು.

ನಮ್ಮ ಪಕ್ಷದವರೇ ನನ್ನನ್ನು ವಿರೋಧಿಸಿದರೂ ಕೆ.ಆರ್ ನಗರ ಕ್ಷೇತ್ರದ ಜನತೆ ನನ್ನನ್ನು ಗೆಲ್ಲಿಸಿದರು. ದೇವೇಗೌಡರಿಗೆ, ಜೆಡಿಎಸ್ ‍ಗೆ ವಿಷ ಹಾಕಿದವರು ಬಹಳ ಜನ ಇದ್ದಾರೆ. ವಿಶ್ವನಾಥ್ ಪಕ್ಷಕ್ಕೆ ಕಾರ್ಕೋಟ ವಿಷ ಹಾಕಿದ್ದಾರೆ, ಅದನ್ನೆಲ್ಲ ಜೀರ್ಣಿಸಿಕೊಳ್ಳುವ ಶಕ್ತಿ ನಮ್ಮ ನಾಯಕರಿಗೆ ಪಕ್ಷಕ್ಕೆ ಇದೆ.

ದೇವಸ್ಥಾನದಲ್ಲಿ ಪ್ರಮಾಣ ಮಾಡಲು ಬೇಕಾದರೂ ಬರ್ತಿನಿ. ಬಹಿರಂಗ ಚರ್ಚೆಗೂ ನಾನು ಸಿದ್ಧ. ನಾನು ಯಾವುದೇ ಆಸೆ ಆಮಿಷಕ್ಕೆ ಒಳಗಾಗಿಲ್ಲ. ಪಕ್ಷಕ್ಕೆ ಮೋಸ ಮಾಡಿ ಹೋಗಿಲ್ಲ. ತಾಯಿ ಚಾಮುಂಡೇಶ್ವರಿ ಮೇಲೆ ಪ್ರಮಾಣ ಮಾಡ್ತೀರಾ? ನಿಮಗೆ ಆ ಧೈರ್ಯ ಇದ್ದರೆ ಬನ್ನಿ ಪ್ರಮಾಣ ಮಾಡಿ ಎಂದು ಸವಾಲು ಹಾಕಿದ್ದಾರೆ

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago