ಬೆಂಗಳೂರು, ,: ಕನ್ನಡದ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರು ನಟಿ ರಮ್ಯಾರನ್ನು ಪ್ರಧಾನಿ ಮೋದಿಗೆ ಟಾಂಗ್ ಕೊಟ್ಟ ಕಾರಣಕ್ಕೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್‌ಗೆ ಹೋಲಿಸುವಂತೆ ಫೋಟೊ ಸಹಿತ ಟ್ವೀಟ್ ಮಾಡಿರುವ ರಮ್ಯಾ ನೆಟ್ಟಿಗರ ಕೋಪಕ್ಕೆ ಗುರಿಯಾಗಿದ್ದಾರೆ. ರಮ್ಯಾ, ಹಲವು ಬಾರಿ ಪ್ರಧಾನಿ ಮೋದಿ ವಿರುದ್ಧ ಟ್ವಿಟರ್‌ನಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಈಗ ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್ ಮಗುವೊಂದರ ಎರಡೂ ಕಿವಿ ಹಿಡಿದೆಳೆಯುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ. ಇದರ ಪಕ್ಕದಲ್ಲೆ ಪ್ರಧಾನಿ ಮೋದಿ ಕೂಡ ಮಗುವಿನ ಕಿವಿ ಎಳೆಯುತ್ತಿರುವ ಫೋಟೊ ಅಪ್‌ಲೋಡ್ ಮಾಡಿದ್ದಾರೆ.
ಈ ಬಗ್ಗೆ ಪೋಸ್ಟ್ ಮಾಡಿರುವ ನಟ ಬುಲೆಟ್ ಪ್ರಕಾಶ್ ರಮ್ಯ ಮೇಡಮ್ (ಪದ್ಮಾವತಿ) ಈ ಮಗುವಿನ ವಯಸ್ಸಿನಲ್ಲಿ ನಿಮ್ಮ ತಂದೆಯವರು ನಿಮ್ಮ ಕಿವಿ ಹಿಂಡಿದ್ದರೆ ನೀವು ಹೀಗೆ ಆಗುತ್ತಿರಲಿಲ್ಲ. ನೀವು ಎರಡು ಚುನಾವಣೆಗಳಲ್ಲಿ ನಿಮ್ಮ ಹಕ್ಕು ಅಂದರೆ ಮತ ಚಲಾಯಿಸದವರು. ನಿಮಗೆ ವಿಶ್ವನಾಯಕ ನರೇಂದ್ರ ಮೋದಿಯವರ ಬಗ್ಗೆ ಮಾತಾಡೋಕ್ಕೆ ಯಾವುದೇ ನೈತಿಕತೆ ಇಲ್ಲ… ನಾಳೆ ವೀಡಿಯೋ ಮೂಲಕ ಉತ್ತರ ಕೊಡುತ್ತೀನಿ… ಎಂದು ಹೇಳಿದ್ದಾರೆ.
ಜನರಿಗೆ ಈ ರೀತಿಯ ತಪ್ಪು ಸಂದೇಶಗಳನ್ನು ರವಾನಿಸುವುದು ಸರಿಯಲ್ಲ. ಒಬ್ಬ ವಿಶ್ವನಾಯಕರ ವಿರುದ್ಧ ಮಾತಾಡೋದು ಸರಿಯಲ್ಲ. ಇಡೀ ಜಗತ್ತು ಅವರನ್ನು ಗೌರವದಿಂದ ಕಾಣುತ್ತದೆ. ಸೆಲ್ಯೂಟ್ ಹೊಡೆಯುತ್ತದೆ. ನಮ್ಮ ಭಾರತ ದೇಶ ಎಲ್ಲೋ ಇತ್ತು. ಆದ್ರೆ ಇಂದು ಈ ದೇಶವನ್ನು ಪ್ರಪಂಚದಾದ್ಯಂತ `ಹಿಂದೂಸ್ತಾನ’ ಎಂದು ಹೇಳುವ ಮಟ್ಟಿಗೆ ಇಂದು ಭಾರತವನ್ನು ಅವರು ಬೆಳೆಸಿದ್ದಾರೆ ಅಂದರು.
ಇಂತಹ ಒಬ್ಬ ವಿಶ್ವನಾಯಕನ ಬಗ್ಗೆ ಮಾತನಾಡಲು ನಿಮಗೆ ಯೋಗ್ಯತೆ, ಅರ್ಹತೆ ಹಾಗೂ ಜವಾಬ್ದಾರಿಯನ್ನು ಬಿಟ್ಟು ಹೊರಬಂದಿದ್ದೀರಿ. ಇದು ನಿಮಗೆ ಶೋಭೆ ತರುವಂತದ್ದಲ್ಲ ಎಂದು ಕಿಡಿಕಾರಿದ್ದಾರೆ.
ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…
ಡಿವೈಡರ್‌ಗೆ ಕಾರು ಡಿಕ್ಕಿ : ಭೀಕರ ಅಪಘಾತದಲ್ಲಿ ಖ್ಯಾತ ನಟಿ ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…