Featured

ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿವಾದ ಪ್ರಸ್ತಾಪಿಸಿದರೆ ಪಾಕಿಸ್ತಾನದ ಮಾನ ಹರಾಜಾಗುತ್ತದೆ , ಭಾರತದ ಗೌರವ, ಘನತೆ ಮತ್ತಷ್ಟು ಹೆಚ್ಚಾಗುತ್ತದೆ : ಸೈಯದ್ ಅಕ್ಬರುದ್ದೀನ್ -Vishwanews24

ಯುನೈಟೆಡ್ ನೇಷನ್ಸ್: ಮುಂದಿನ ವಾರ ವಿಶ್ವಸಂಸ್ಥೆಯ ಉನ್ನತ ಮಟ್ಟದ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸಿದರೆ ಪಾಕಿಸ್ತಾನದ ಮಾನ ಹರಾಜಾಗುತ್ತದೆ  ಎಂದು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಸೈಯದ್ ಅಕ್ಬರುದ್ದೀನ್ ಹೇಳಿದ್ದಾರೆ.

ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೈಯದ್ ಅಕ್ಬರುದ್ದೀನ್ ದೇಶದ ವಿಚಾರದಲ್ಲಿ ಜಾಗತಿಕ ವೇದಿಕೆಗಳನ್ನು ಹೇಗೆ ಬಳಸಿಕೊಳ್ಳಬೇಕು ಎಂಬುದನ್ನು ದೇಶಗಳು ಅರ್ಥ ಮಾಡಿಕೊಳ್ಳಬೇಕು, ಪಾಕಿಸ್ತಾನ ಮುಂದಿನ ವಾರ ಕಾಶ್ಮೀರ ವಿವಾದ ಪ್ರಸ್ತಾಪಿಸಿದರೆ ಅದರ ಮಟ್ಟ ಕೆಳಗಿಳಿಯುತ್ತದೆ, ಭಾರತ ಇನ್ನಷ್ಟು ಎತ್ತರಕ್ಕೆ ಬೆಳೆಯುತ್ತದೆ. ಪ್ರಧಾನ ಮಂತ್ರಿಗಳು ನಡೆಸುವ ಸಭೆಗಳು, ಬಹುಪಕ್ಷೀಯ ಮತ್ತು ದ್ವಿಪಕ್ಷೀಯ ಮಾತುಕತೆಗಳ ಮೂಲಕ ಭಾರತದ ಸ್ಥಾನ ವಿಶ್ವಸಂಸ್ಥೆಯಲ್ಲಿ ಹೆಚ್ಚಾಗುತ್ತದೆ ಎಂದರು.

ಪಾಕಿಸ್ತಾನ ಏನು ಮಾಡುತ್ತದೆ ಎಂಬುದು ಅದಕ್ಕೆ ಬಿಟ್ಟದ್ದು. ಪಾಕಿಸ್ತಾನ ಹೇಗೆ ಭಯೋತ್ಪಾದನೆಯ ತಾಣವಾಗಿದೆ ಎಂದು  ಎಲ್ಲರಿಗೂ ಗೊತ್ತಿದೆ. ಈಗ ದ್ವೇಷದ ಮಾತುಗಳ ಮೂಲಕ ತಮ್ಮ ಸ್ಥಾನಮಾನವನ್ನು ಕೆಳಹಂತಕ್ಕೆ ತರಬೇಕೆಂದರೆ ತಂದುಕೊಳ್ಳಲಿ ಅದು ಅವರ ಇಷ್ಟ, ದ್ವೇಷ, ವಿಷಯ ಮಾತುಗಳು, ಬರಹಗಳು ಹೆಚ್ಚು ಸಮಯ ಬಾಳುವುದಿಲ್ಲ ಎಂದರು.

ಮುಂದಿನ ವಾರ ಸೆಪ್ಟೆಂಬರ್ 27ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆ ನಡೆಯಲಿದ್ದು ಅದರಲ್ಲಿ ಕಾಶ್ಮೀರ ವಿಚಾರವನ್ನು ಪ್ರಸ್ತಾಪಿಸುವುದಾಗಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದರು. ಅಂದೇ ಭಾರತದ ಪ್ರಧಾನಿ ನರೇಂದ್ರ ಮೋದಿ ಕೂಡ ವಿಶ್ವಸಂಸ್ಥೆಯಲ್ಲಿ ಮಾತನಾಡುವ ಸಾಧ್ಯತೆಯಿದೆ.
Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago