ಹೊಸದಿಲ್ಲಿ, : ಪ್ರಧಾನಮಂತ್ರಿ ನರೇಂದ್ರ ಮೋದಿ ಬುಧವಾರ ವಿಶ್ವಸಂಸ್ಥೆಯ ಅತ್ಯುನ್ನತ ಪರಿಸರ ಗೌರವ ‘ಚಾಂಪಿಯನ್ಸ್ ಆಫ್ ದ ಅರ್ಥ್’ ಪ್ರಶಸ್ತಿಯನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟರ್ರೆಸ್‌ರಿಂದ ಸ್ವೀಕರಿಸಿದರು.
ಪರಿಸರ ಸಂರಕ್ಷಣೆ ಹಾಗೂ ಹವಾಮಾನ ಬದಲಾವಣೆಯನ್ನು ಕಡಿಮೆಗೊಳಿಸುವ ಪ್ರಯತ್ನಗಳಲ್ಲಿ ಆದರ್ಶಪ್ರಾಯ ನಾಯಕತ್ವವನ್ನು ತೋರಿದ ಪ್ರಧಾನಮಂತ್ರಿ ಮೋದಿ ಅವರನ್ನು ಕಾರ್ಯನೀತಿ ನಾಯಕತ್ವ ವಿಭಾಗದಡಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ದಿಲ್ಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರಧಾನಿ ಮೋದಿ,”ಇದು ಭಾರತೀಯರಿಗೆ ಸಂದ ಗೌರವ. ಪರಿಸರ ಸಂರಕ್ಷಣೆಯಲ್ಲಿ ಭಾರತೀಯರು ಬದ್ಧರಾಗಿದ್ದಾರೆ” ಎಂದರು.
”ಹವಾಮಾನ ಕ್ರಿಯೆಯಲ್ಲಿ ವಿಶ್ವಕ್ಕೆ ದಿಟ್ಟ ನಾಯಕತ್ವದ ಅಗತ್ಯವಿದೆ. ಇದಕ್ಕೆ ಒಂದು ನಿದರ್ಶನವಾಗಿರುವ ಭಾರತಕ್ಕೆ ಕೃತಜ್ಞತೆ ಸಲ್ಲಿಸುವೆ. ಪ್ರಧಾನಮಂತ್ರಿ ನರೇಂದ್ರ ಮೋದಿಗೆ ‘ಚಾಂಪಿಯನ್ಸ್ ಆಫ್ ದ ಅರ್ಥ್’ ಪ್ರಶಸ್ತಿ ನೀಡಿದ್ದಕ್ಕೆ ಸಂತೋಷವಾಗುತ್ತಿದೆ” ಎಂದು ಗುಟರ್ರೆಸ್ ಟ್ವೀಟ್ ಮಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…