ವಿಶ್ವಾದ್ಯಂತ ತಲ್ಲಣ ಸೃಷ್ಟಿಸಿರುವ ಚೀನಾದ ಮಾರಕ ಕೊರೊನಾ ವೈರಾಣು ಸೋಂಕು : ಕರಾವಳಿಯಲ್ಲಿ ಮುನ್ನೆಚ್ಚರಿಕೆ -Vishwanews24

ಮಂಗಳೂರು: ವಿಶ್ವಾದ್ಯಂತ ತಲ್ಲಣ ಸೃಷ್ಟಿಸಿರುವ ಚೀನಾದ ಮಾರಕ ಕೊರೊನಾ ವೈರಾಣು ಸೋಂಕು ಬಾಧಿತ ಭಾರತದ ಪ್ರಥಮ ಪ್ರಕರಣ ಸಮೀಪದ ಕೇರಳದಲ್ಲಿ ಪತ್ತೆಯಾದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿದೆ.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್.ಸೆಲ್ವಮಣಿ ಅಧ್ಯಕ್ಷತೆಯಲ್ಲಿ ಮಂಗಳೂರು ಜಿ.ಪಂ. ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ಕೊರೊನಾ ಸೋಂಕು ಪತ್ತೆ, ಮುನ್ನೆಚ್ಚರಿಕೆ ಕ್ರಮ ಹಾಗೂ ಜಾಗೃತಿ ಕಾರ್ಯಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಲಾಯಿತು.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ನವಮಂಗಳೂರು ಬಂದರು ಮಂಡಳಿ, ರೈಲ್ವೆ ಇಲಾಖೆ, ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳು, ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೆನ್ಲಾಕ್ ಮತ್ತು ಲೇಡಿಗೋಶನ್ ಆಸ್ಪತ್ರೆಯ ಹಿರಿಯ ಅಧಿಕಾರಿಗಳು ಸಮಾಲೋಚನೆ ಸಭೆಯಲ್ಲಿ ಭಾಗವಹಿಸಿದ್ದರು.

ಮಂಗಳೂರು ವಿಮಾನ ನಿಲ್ದಾಣದ ಆಯಕಟ್ಟಿನ ಭಾಗಗಳಲ್ಲಿರುವ ಎಲ್‌ಇಡಿ ಫಲಕಗಳಲ್ಲಿ ಕೊರೊನಾ ಸೋಂಕು ಮತ್ತು ಎಚ್ಚರಿಕೆ ಬಗ್ಗೆ ಮಾಹಿತಿ ಪ್ರದರ್ಶನ ಆರಂಭಿಸಲಾಗಿದೆ. ಮಂಗಳೂರಿನಿಂದ ಚೀನಾಕ್ಕೆ ನೇರ ವಿಮಾನ ಸೌಲಭ್ಯ ಇಲ್ಲ, ಹೀಗಾಗಿ ಇಲ್ಲಿ ಸ್ಕ್ರೀನಿಂಗ್ ನಡೆಯುತ್ತಿಲ್ಲ. ಕೇಂದ್ರ ಸರ್ಕಾರದಿಂದ ನಮಗೆ ಇನ್ನೂ ಯಾವುದೇ ಸೂಚನೆ ಬಂದಿಲ್ಲ. ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ಸೂಚನೆಗಳನ್ನು ಪಾಲನೆ ಮಾಡುತ್ತಿದ್ದೇವೆ ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ.

ಭಯ ಬೇಡ, ಎಚ್ಚರವಿರಲಿ
– ಲಕ್ಷಣ: ತೀವ್ರ ಜ್ವರ ಪ್ರಾರಂಭ, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ ಹಾಗೂ ಭೇದಿ.
– ಹರಡುವ ರೀತಿ: ಸಾಮಾನ್ಯ ಫ್ಲೂ ಹರಡುವ ರೀತಿಯಲ್ಲಿಯೇ ಹರಡುತ್ತದೆ. ಸಾಮಾನ್ಯವಾಗಿ ಸೋಂಕಿತರು ಕೆಮ್ಮಿದಾಗ, ಸೀನಿದಾಗ, ಸೋಂಕಿತರನ್ನು ಮುಟ್ಟುವುದರಿಂದ ಹರಡಬಹುದು.
– ಸೋಂಕು ಪತ್ತೆ: ಮೂಗು, ಗಂಟಲಿನ ಸ್ರಾವದ ಲೇಪನ ಮತ್ತು ರಕ್ತದ ಮಾದರಿ ಪರೀಕ್ಷೆ.
– ಚಿಕಿತ್ಸೆ: ಲಕ್ಷಣ ಆಧಾರಿತ ಚಿಕಿತ್ಸೆ. ನಿರ್ದಿಷ್ಟ ಚಿಕಿತ್ಸೆ ಲಭ್ಯವಿಲ್ಲ.
– ಮುಂಜಾಗರೂಕತಾ ಕ್ರಮ: ಕೆಮ್ಮುವಾಗ ಮತ್ತು ಸೀನುವಾಗ ಬಾಯಿಗೆ ಕರವಸ್ತ್ರ ಅಡ್ಡ ಹಿಡಿಯುವುದು, ಕೈಯನ್ನು ಆಗಾಗ ತೊಳೆದುಕೊಳ್ಳುವ ಮೂಲಕ ಸರಳ ನೈರ್ಮಲ್ಯ ಕ್ರಮ. ಅನಾರೋಗ್ಯದಿಂದಿರುವ ಅಥವಾ ಕೆಮ್ಮು ಮತ್ತು ನೆಗಡಿ ಇತ್ಯಾದಿ ಅನಾರೋಗ್ಯದ ಲಕ್ಷಣಗಳನ್ನು ಹೊಂದಿರುವ ಜನರೊಂದಿಗೆ ನಿಕಟ ಸಂಪರ್ಕ ಹೊಂದದಿರುವುದು. ಪ್ರಾಣಿಗಳ ನೇರ ಸಂಪರ್ಕ ಹಾಗೂ ಬೇಯಿಸದ ಅಥವಾ ಕಚ್ಚಾ ಮಾಂಸ ಸೇವನೆ ಮಾಡದಿರುವುದು.
– ಹೆಚ್ಚಿನ ಮಾಹಿತಿಗೆ: ದ.ಕ. ಜಿಲ್ಲಾ ಸರ್ವೇಕ್ಷಣಾ ಘಟಕ (0824- 2420466) ಸಂಪರ್ಕಿಸಿ.

ಉಡುಪಿಯಲ್ಲೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಹೀಗಾಗಿ ಶುಕ್ರವಾರ ಕೆಎಂಸಿ ವೈದ್ಯರು ಹಾಗೂ ಜಿಲ್ಲಾಸ್ಪತ್ರೆ ವೈದ್ಯರೊಂದಿಗೆ ಸಮಾಲೋಚನೆ ಸಭೆ ನಡೆಸಲಾಗುವುದು. ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಹಾಗೂ ಔಷಧ ದಾಸ್ತಾನುಗಳ ಬಗ್ಗೆ ಚರ್ಚೆ ನಡೆಸಲಾಗುವುದು.
– ಡಾ.ಸುಧೀರ್‌ಚಂದ್ರ ಸೂಡ, ಡಿಎಚ್‌ಒ, ಉಡುಪಿ

ಕೊರೊನಾ ಸೋಂಕು ಬಗ್ಗೆ ಸಂಬಂಧಪಟ್ಟ ಇಲಾಖೆ, ಸಂಸ್ಥೆಗಳು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಲಾಗಿದ್ದು, ಸಾರ್ವಜನಿಕ ವಲಯದಲ್ಲಿ ಜಾಗೃತಿ ಮೂಡಿಸಲು ತೀರ್ಮಾನಿಸಲಾಗಿದೆ. ಜಿಲ್ಲಾಧಿಕಾರಿ ಶುಕ್ರವಾರ ಜನರಿಗೆ ಮಾಹಿತಿ ಒದಗಿಸಲಿದ್ದಾರೆ.
– ಡಾ.ಆರ್.ಸೆಲ್ವಮಣಿ, ಸಿಇಒ, ದ.ಕ. ಜಿಲ್ಲಾ ಪಂಚಾಯಿತಿ

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago