ಪಣಜಿ: ಮನೋಹರ್ ಪರಿಕ್ಕರ್ ನಿಧನದ ನಂತರ ತೆರವಾದ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮೋದ್ ಸಾವಂತ್ ಆಯ್ಕೆಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು ಇಂದು ನಡೆದ ವಿಶ್ವಾಸ ಮತ ಯಾಚನೆಯಲ್ಲಿ ಗೆಲುವು ಸಾಧಿಸಿದ್ದಾರೆ.
ಗೋವಾ ವಿಧಾನಸಭೆಯಲ್ಲಿ ಇಂದು ನಡೆದ ವಿಶ್ವಾಸ ಮತದಲ್ಲಿ ಸಿಎಂ ಪ್ರಮೋದ್ ಸಾವಂತ್ ಗೆಲುವು ಸಾಧಿಸಿದ್ದು, ಪ್ರಮೋದ್ ಸಾವಂತ್ ಸರ್ಕಾರಕ್ಕೆ 20 ಶಾಸಕರು ಬೆಂಬಲ ಘೋಷಣೆ ಮಾಡಿದ್ದಾರೆ. ಆ ಮೂಲಕ ಪ್ರಮೋದ್ ಸಾವಂತ್ ಸರ್ಕಾರ ಗೆಲುವು ಸಾಧಿಸಿದ್ದಾರೆ.
ಮೂಲಗಳ ಪ್ರಕಾರ ಬಿಜೆಪಿ ನೇತೃತ್ವ ಮೈತ್ರಿಕೂಟಕ್ಕೆ ಒಟ್ಟು 20 ಶಾಸಕರು ಬೆಂಬಲ ನೀಡಿದ್ದು, ಬಿಜೆಪಿಯ 11, ಮಿತ್ರಪಕ್ಷಗಳಾದ ಜಿಎಫ್ ಪಿ, ಎಂಜಿಪಿ ತಲಾ ಮೂರು ಶಾಸಕರು ಮತ್ತು 3 ಪಕ್ಷೇತರ ಶಾಸಕರು ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ ಎನ್ನಲಾಗಿದೆ.ಅಂತೆಯೇ ಓರ್ವ ಬಿಜೆಪಿ ಶಾಸಕ ಅನಾರೋಗ್ಯದಿಂದ ವಿಶ್ವಾಸಮತ ಯಾಚನೆಗೆ ಗೈರಾಗಿದ್ದಾರೆ.
40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಇದೀಗ 36 ಮಂದಿ ಶಾಸಕರಿದ್ದು, ಬಿಜೆಪಿ ಶಾಸಕ ಫ್ರಾನ್ಸಿಸ್ ಡಿಸೋಜಾ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅಂತೆಯೇ ಇಬ್ಬರು ಕಾಂಗ್ರೆಸ್ ಶಾಸಕರಾದ ಸುಭಾಷ್ ಶಿರೋಡ್ಕರ್ ಹಾಗೂ ದಯಾನಂದ್ ಸೊಪ್ಚೆ ಅವರೂ ಕೂಡ ರಾಜಿನಾಮೆ ನೀಡಿದ್ದಾರೆ. ಹೀಗಾಗಿ ಗೋವಾ ವಿಧಾನಸಭೆ ಸದಸ್ಯ ಬಲ ಇದೀಗ 36ಕ್ಕೆ ಕುಸಿದಿದ್ದು, ಬಹುಮತ ಸಾಬೀತಿಗೆ 19 ಶಾಸಕರ ಬೆಂಬಲ ಬೇಕಿತ್ತು.
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಸಂಧಾನ ಪ್ರಕ್ರಿಯೆ ಮೂಲಕ ನೂತನ ನಾಯಕನ ಆಯ್ಕೆ ಸುಗಮವಾಗಿತ್ತು.ಮುಖ್ಯಮಂತ್ರಿ ಸಾವಂತ್ ಮಂಡಿಸಿದ ವಿಶ್ವಾಸಮತ ಯಾಚನೆ ನಿರ್ಣಯಕ್ಕೆ 5 ಮತಗಳ ಅಂತರದಿಂದ ಗೆಲುವು ದೊರೆತಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…