ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ : ಫೈನಲ್ಗೆ ಎಂಟ್ರಿ ಕೊಟ್ಟ ನೀರಜ್ ಚೋಪ್ರಾ – Vishwanews24
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ : ಫೈನಲ್ಗೆ ಎಂಟ್ರಿ ಕೊಟ್ಟ ನೀರಜ್ ಚೋಪ್ರಾ
ವಾಷಿಂಗ್ಟನ್: ಒಲಂಪಿಕ್ಸ್ನಲ್ಲಿ ಚಿನ್ನಗೆದ್ದು ಭಾರತ ಕೀರ್ತಿ ಪತಾಕೆ ಹಾರಿಸಿದ ನಿರಜ್ ಚೋಪ್ರಾ ಮತ್ತೊಂದು ಸಾಧನೆ ಮಾಡಿದ್ದಾರೆ. ವಿಶ್ವ ಅಥ್ಲೆಟಿಕ್ಸ್ನ ಚಾಂಪಿಯನ್ಶಿಪ್ನ ಪುರುಷರ ವಿಭಾಗದ ಜಾವೆಲಿನ್ ಥ್ರೋನಲ್ಲಿ ಫೈನಲ್ಗೆ ಎಂಟ್ರಿ ಕೊಟ್ಟಿದ್ದು, ಅರ್ಹತಾ ಸುತ್ತಿನ ಮೊದಲ ಎಸೆತದಲ್ಲೇ 88.39 ಮೀಟರ್ ಜಾವೆಲಿನ್ ಎಸೆಯುವ ಮೂಲಕ ಸಾಧನೆ ಮಾಡಿದ್ದಾರೆ.
ಅಮೆರಿಕದ ಹೈವರ್ಡ್ ಮೈದಾನದಲ್ಲಿ ಭಾನುವಾರ ಮುಂಜಾನೆ ನಡೆಯಲಿರುವ ಫೈನಲ್ನಲ್ಲಿ ನೀರಜ್ ಸ್ಪರ್ಧಿಸಲಿದ್ದಾರೆ. ಕಳೆದ ತಿಂಗಳು ಸ್ಟಾಕ್ಹೋಮ್ನಲ್ಲಿ ನಡೆದ ಪ್ರತಿಷ್ಠಿತ ಡೈಮಂಡ್ ಲೀಗ್ನಲ್ಲಿ ನೀರಜ್ 89.94 ಮೀಟರ್ ಜಾವೆಲಿನ್ ಎಸೆಯುವ ಮೂಲಕ ತಮ್ಮದೇ ದಾಖಲೆಯನ್ನು ಮುರಿದಿದ್ದರು.
ಇದಕ್ಕೂ ಮುನ್ನ ಫಿನ್ಲ್ಯಾಂಡ್ನಲ್ಲಿ ಪಾವೊ ನೂರ್ಮಿ ಗೇಮ್ಸ್ನಲ್ಲಿ ನೀರಜ್ ಚೋಪ್ರಾ 89.30 ಮೀಟರ್ ಜಾವೆಲಿನ್ ಎಸೆಯುವ ಮೂಲಕ ಬೆಳ್ಳಿ ಪದಕ ಗೆದ್ದಿದ್ದರು. ನಂತರ ಕುರ್ಟೇನ್ ಗೇಮ್ಸ್ನಲ್ಲಿ ತಮ್ಮ ಮೊದಲ ಪ್ರಯತ್ನದಲ್ಲೇ 86.69 ಮೀ. ದೂರ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದರು.
