ಬುಡಾಪೆಸ್ಟ್:-ಹಂಗೇರಿ ರಾಜಧಾನಿಯಲ್ಲಿ ನಡೆದ ವಿಶ್ವ ಕುಸ್ತಿ ಚಾಂಪಿಯನ್‍ಶಿಪ್‍ನ ಫೈನಲ್‍ನಲ್ಲಿ ಭಾರತದ ಹೆಮ್ಮೆಯ ಪುತ್ರ ಭಜರಂಗ್ ಪೂನಿಯಾ ಚಿನ್ನದ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ. ಬುಡಾಪೆಸ್ಟ್‍ನಲ್ಲಿ ನಿನ್ನೆ ರಾತ್ರಿ ನಡೆದ ಪುರುಷರ 65 ಕೆಜಿ ವಿಭಾಗದಲ್ಲಿ ಭಜರಂಗ್ ಕ್ಯೂಬಾದ ಅಲೆಜಾಂಡ್ರೋ ಎನ್ರಿಕ್ ವಾಲ್ಟನ್ ಲೂಬಿಯರ್ ವಿರುದ್ಧ ಸೆಣಸಿ ವಿಜೇತರಾದರು.
ಭಜರಂಗ್ 2013 ವಿಶ್ವ ಕುಸ್ತಿ ಪಂದ್ಯದಲ್ಲಿ ಕಂಚಿನ ಪದಕ ಗೆದ್ದಿದ್ದರು, ಈಗ ಚಿನ್ನದ ಸಾಧನೆ ಮಾಡಿ ಕುಸ್ತಿ ವಿಬಾಗದಲ್ಲಿ ಭಾರತದ ಪ್ರತಿಷ್ಠೆಯನ್ನು ಹೆಚ್ಚಿಸಿದ್ದಾರೆ. ರಷ್ಯಾ ರಾಜಧಾನಿ ಮಾಸ್ಕೋದಲ್ಲಿ 2010ರಲ್ಲಿ ನಡೆದಿದ್ದ ವಿಶ್ವ ಕುಸ್ತಿ ಚಾಂಪಿಯನ್‍ಶಿಪ್‍ನನ 66 ಕೆಜಿ ವಿಭಾಗದಲ್ಲಿ ಭಾರತದ ಸುಶೀಲ್ ಕುಮಾರ್ ಸ್ವರ್ಣ ಪದಕ ಗೆದ್ದಿದ್ದರು. ಈಗ ಭಜರಂಗ್ ಈ ಸಾಧನೆ ಮಾಡಿದ ದೇಶದ ಎರಡನೇ ಕುಸ್ತಿಪಟುವಾಗಿದ್ದಾರೆ. ಇತ್ತೀಚೆಗೆ ನಡೆದ ಕಾಮನ್‍ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಕ್ರೀಡಾಕೂಟಗಳಲ್ಲೂ ಇವರು ಚಿನ್ನದ ಪದಕಗಳನ್ನು ಜಯಿಸಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…