Featured

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಪ್ರಶಸ್ತಿ ಗೆದ್ದ ಭಾರತದ ಮೊದಲ ಆಟಗಾರ್ತಿ ಎಂಬ ದಾಖಲೆ ಬರೆದ ಪಿ.ವಿ.ಸಿಂಧು -Vishwanews24

ಬಾಸೆಲ್ : ಭಾರತದ ಶೇಟ್ಲರ್ ಪಿ.ವಿ.ಸಿಂಧು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ಗೆ ಮುತ್ತಿಟ್ಟಿದ್ದಾರೆ. ಪಿ.ವಿ.ಸಿಂಧು ಅವರು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಪ್ರಶಸ್ತಿ ಗೆದ್ದ ಭಾರತದ ಮೊದಲ ಆಟಗಾರ್ತಿ ಎಂಬ ದಾಖಲೆಯನ್ನು ಬರೆದಿದ್ದಾರೆ.

38 ನಿಮಿಷಗಳ ಫೈನಲ್ ಹೋರಾಟದಲ್ಲಿ ಅವರದ್ದು ಅಧಿಕಾರಯುತ ಗೆಲುವು. ಹೈದರಾಬಾದಿನ ಸಿಂಧು 21–7, 21–7ರ ಎರಡು ನೇರ ಗೇಮ್‌ಗಳಲ್ಲಿ ಜಪಾನಿನ ನೊಜೊಮಿ ಒಕುಹರಾ ವಿರುದ್ಧ ಜಯಶಾಲಿಯಾದರು.

ಈ ಹಿಂದೆ ಎರಡು ಬಾರಿ ಫೈನಲ್ ಪ್ರವೇಶ ಮಾಡಿದ್ದರು. ಆದರೆ ಪ್ರಶಸ್ತಿಯಿಂದ ವಂಚಿತರಾಗಿದ್ದ ಅವರು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದ್ದರು. ಇಂದು ನಡೆದ ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ಜಪಾನ್ ನ ನೋಜೊಮಿ ಓಕುಹರಾ ಅವರನ್ನು 21-7, 21-7ರ ಅಂತರದಿಂದ ಮಣಿಸುವ ಮೂಲಕ ಇತಿಹಾಸ ಪುಟ ಸೇರಿದ್ದಾರೆ.

ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಇದು ಸಿಂಧು ಅವರ ಐದನೇ ಪದಕ. 2013, 2014ರಲ್ಲಿ ಸತತ ಎರಡು ಕಂಚು, 2017 ಮತ್ತು 2018ರಲ್ಲಿ ಸತತ ಎರಡು ಬಾರಿ ಬೆಳ್ಳಿ ಪದಕ ಗೆದ್ದಿದ್ದರು. ಹೋದ ವರ್ಷ ಚೀನಾದ ನಾನ್ಜಿಂಗ್‌ನಲ್ಲಿ ನಡೆದಿದ್ದ  ಟೂರ್ನಿಯಲ್ಲಿ ಆಡಲು ಹೋಗುವ ಮುನ್ನ ಅವರು, ‘ಹೋದ ಸಲ ಬೆಳ್ಳಿ ಗೆದ್ದಿದ್ದೆ. ಈ ಸಲ ಆ ಪದಕದ ಬಣ್ಣ ಬದಲಿಸುತ್ತೇನೆ’ ಎಂದು ಚಿನ್ನ ಗೆಲ್ಲುವ ವಿಶ್ವಾಸವ್ಯಕ್ತಪಡಿಸಿದ್ದರು. ಆದರೆ ಹೋದ ಸಲವೂ ಅವರು ಬೆಳ್ಳಿ ಪದಕ ಗಳಿಸಿದ್ದರು.

ಈ ಬಾರಿ ಸತತ ಮೂರನೇ ಬಾರಿಗೆ ವಿಶ್ವ ಚಾಂಪಿಯನ್ ಶಿಪ್ ಫೈನಲ್ ಪ್ರವೇಶಿಸಿದ್ದ ಸಿಂಧು, ಚೊಚ್ಚಲ ಬಂಗಾರದ ಕನಸು ನನಸು ಮಾಡಿಕೊಂಡಿದ್ದಾರೆ.

ಭಾರತದ ದಂತಕತೆ ಪ್ರಕಾಶ್ ಪಡುಕೋಣೆ ಅವರು 1983ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದಿದ್ದರು. ಈ ಪ್ರಶಸ್ತಿ ಗೆದ್ದ ಭಾರತದ ಮೊದಲ ಆಟಗಾರ ಎನಿಸಿದ್ದರು. ಸದ್ಯ 26 ವರ್ಷಗಳ ನಂತರ ಭಾರತಕ್ಕೆ ಒಲಿದ ಮೊದಲ ಪದಕ ಇದಾಗಿದೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

17 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago