Featured

ವಿಷ್ಣುವರ್ಧನ್ ಹೆಸರಿಗೆ ಮಸಿ ಬಳಿಯುವ ಕೆಲಸವನ್ನು ಅನಿರುದ್ದ ಮಾಡಲ್ಲ ಅನ್ನುವುದು ನನ್ನ ನಂಬಿಕೆ : ಎಸ್.ನಾರಾಯಣ್ – Vishwanews24

ವಿಷ್ಣುವರ್ಧನ್ ಹೆಸರಿಗೆ ಮಸಿ ಬಳಿಯುವ ಕೆಲಸವನ್ನು ಅನಿರುದ್ದ ಮಾಡಲ್ಲ ಅನ್ನುವುದು ನನ್ನ ನಂಬಿಕೆ : ಎಸ್.ನಾರಾಯಣ್

ನಟ ಅನಿರುದ್ಧ ಹೊಸ ಧಾರಾವಾಹಿಯನ್ನು ಘೋಷಿಸುತ್ತಿದ್ದಂತೆಯೇ ವಿರೋಧ ವ್ಯಕ್ತವಾಗಿದೆ. ಎಸ್.ನಾರಾಯಣ್ ನಿರ್ದೇಶನದ ಸೂರ್ಯವಂಶ ಧಾರಾವಾಹಿಯಲ್ಲಿ ಅನಿರುದ್ಧ ನಾಯಕನಾಗಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯನ್ನು ತಡೆಯಬೇಕು ಎಂದು ಕನ್ನಡ ಕಿರುತೆರೆ ನಿರ್ಮಾಪಕರು ಆಗ್ರಹಿಸಿದ್ದಾರೆ. ಅನಿರುದ್ಧ ಮೇಲೆ ಎರಡು ವರ್ಷಗಳ ಕಾಲ ಅಲಿಖಿತ ನಿಷೇಧ ಹೇರಿದ್ದರಿಂದ ಅವರಿಗಾಗಿ ಸೀರಿಯಲ್ ಮಾಡದಂತೆ ನಾರಾಯಣ್ ಅವರಿಗೆ ಮನವಿ ಮಾಡಿದ್ದಾರೆ.

 

ಈ ಕುರಿತು ಮಾತನಾಡಿರುವ ಎಸ್.ನಾರಾಯಣ್, ‘ ಅನಿರುದ್ದ ಅವರ ಬಗ್ಗೆ ಬಹಳಷ್ಟು ಆರೋಪಗಳನ್ನ ಮಾಡಿದ್ದಾರೆ.ಆ ಆರೋಪಗಳು ಸುಳ್ಳಾಗಲಿ ಅಂತ ನಾನು ಆಶಿಸುತ್ತೇನೆ. ಅನಿರುದ್ದ ಅವರು ವಿಷ್ಣುವರ್ಧನ್ ಅಳಿಯ. ಅವರ ಹೆಸರಿಗೆ ಮಸಿ ಬಳಿಯುವ ಕೆಲಸವನ್ನು ಮಾಡಲ್ಲ ಅನ್ನುವುದು ನನ್ನ ನಂಬಿಕೆ. ಮಾತು ಕತೆಯ ಮೂಲಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಅವಕಾಶ ಇದೆ. ಕಿರುತರೆಯ ನಿರ್ಮಾಪಕರು ನನ್ನ ಬಳಿ ಮಾತನಾಡಿ ಅವರು ಎದುರಿಸಿದ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಇಂದು ಸಂಜೆ ಸಭೆಯಲ್ಲಿ ಆ ಕುರಿತು ಮಾತನಾಡುತ್ತೇನೆ’ ಎಂದಿದ್ದಾರೆ.

ಕನ್ನಡ ಕಿರುತೆರೆ ನಿರ್ಮಾಪಕರ ಸಂಘವು ಅನಿರುದ್ಧ ಅವರಿಗೆ ಎರಡು ವರ್ಷಗಳ ಕಾಲ ನಿಷೇಧ ಹೇರುವ ಕುರಿತು ತೀರ್ಮಾನ ತಗೆದುಕೊಂಡಿತ್ತು. ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಕಿರಿಕ್ ಮಾಡಿದರು ಎನ್ನುವ ಕಾರಣಕ್ಕಾಗಿ ಎರಡು ವರ್ಷಗಳ ಕಾಲ ಅನಿರುದ್ಧ ಅವರಿಗೆ ಯಾರೂ ಕೆಲಸ ಕೊಡಬಾರದು ಎಂದು ಹೇಳಲಾಗಿತ್ತು. ಆದರೆ, ಘಟನೆ ನಡೆದ ಕೆಲವೇ ತಿಂಗಳಲ್ಲೇ ಅನಿರುದ್ಧ ಮತ್ತೊಂದು ಧಾರಾವಾಹಿಗೆ ಹೀರೋ ಆಗಿ ಆಯ್ಕೆಯಾಗಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago