Featured

ವಿಷ್ಣು ಅಭಿಮಾನಿಗಳಿಗೆ ಸಿಹಿ ಸುದ್ದಿ : ಮೂರ್ನಾಲ್ಕು ದಿನಗಳಲ್ಲಿ ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು: ಯಡಿಯೂರಪ್ಪ ಭರವಸೆ -Vishwanews24

ಬೆಂಗಳೂರು: ‘ಮೂರ್ನಾಲ್ಕು ದಿನಗಳಲ್ಲಿ ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗುವುದು’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದರು.

ಡಿಸೆಂಬರ್‌ 30ರಂದು ನಟ ವಿಷ್ಣುವರ್ಧನ್‌ ಅವರ ಪುಣ್ಯಸ್ಮರಣೆ ಅಂಗವಾಗಿ ಮುಖ್ಯಮಂತ್ರಿ ಅವರನ್ನು ಭೇಟಿಯಾದ ನಟಿ ಭಾರತಿ ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣದ ಕುರಿತು ಚರ್ಚಿಸಿದರು.

ಅವರು ಇಂದು ಬೆಳಗ್ಗೆ ಸಿಎಂ ಬಿಎಸ್‌ವೈ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಈ ವಿಷಯ ತಿಳಿಸಿದರು. ಇನ್ನು ಇದೇ ವೇಳೆ ಅವರು ತಮ್ಮ ಮಾತನ್ನು ಮುಂದುವರೆಸಿ, ಈಗಾಗಲೇ ಸ್ಮಾರಕ ಕಾರ್ಯ ಮೈಸೂರಿನಲ್ಲಿ ನಡೆಯುತ್ತಿದೆ‌.‌ ಯಡಿಯೂರಪ್ಪ ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ‌. ವಿಷ್ಣುವರ್ಧನ್ ಯಡಿಯೂರಪ್ಪ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ. ಅವರು ವಿಷ್ಣುವರ್ಧನ್ ಬಗ್ಗೆ ತುಂಬಾ ಗೌರವ ಇಟ್ಟುಕೊಂಡಿದ್ದಾರೆ ಅಂತ ಹೇಳಿದರು.

ಸ್ಮಾರಕ ನಿರ್ಮಾಣ ಎಲ್ಲಿ ಮಾಡಬೇಕು ಎಂದೇ ಅನೇಕ ವರ್ಷಗಳ ವರೆಗೆ ವಿವಾದ ಉಂಟಾಗಿತ್ತು. ವಿಷ್ಣುವರ್ಧನ್‌ ಅವರ ಸಮಾಧಿ ಇರುವ ಅಭಿಮಾನ್‌ ಸ್ಟುಡಿಯೋದ ಜಾಗದಲ್ಲಿಯೇ ವಿಷ್ಣುವರ್ಧನ್‌ ಸಮಾಧಿ ನಿರ್ಮಿಸಬೇಕು ಎಂಬ ಎಲ್ಲರ ಅಭಿಲಾಷೆಗೆ ಬಾಲಕೃಷ್ಣ ಅವರ ಕುಟುಂಬ ಸದಸ್ಯರು ತಕರಾರು ಎತ್ತಿದ್ದರು. ಆಗ ವಿಷ್ಣು ಸೇನಾ ಸಮಿತಿ ಪ್ರತಿಭಟನೆ ನಡೆಸಿತ್ತು.

ಈ ವ್ಯಾಜ್ಯ ಕೋರ್ಟ್‌ ಮೆಟ್ಟಿಲೇರಿತ್ತು. ಇದರಿಂದಾಗಿ ಮೈಸೂರಿನ ನಾಲ್ಕನೇ ಹೆಚ್ಚುವರಿ ಸಿವಿಲ್‌ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಕಾಮಗಾರಿ ಮುಂದುವರಿಕೆಗೆ ತಡೆ ನೀಡಿತ್ತು.

ಈ ತಡೆಯಾಜ್ಞೆ ತೆರವುಗೊಳಿಸುವಂತೆ ಕೋರಿ ರಾಜ್ಯ ಕಂದಾಯ ಇಲಾಖೆ ಕಾರ್ಯದರ್ಶಿ ಸೇರಿದಂತೆ ಮೈಸೂರು ಜಿಲ್ಲಾಡಳಿತ ಹೈಕೋರ್ಟ್‌ ಮೆಟ್ಟಿಲೇರಿತ್ತು. ಏಪ್ರಿಲ್‌ನಲ್ಲಿ ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅಧಿನ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿತು. ಅದರಿಂದ ಸ್ಮಾರಕ ನಿರ್ಮಾಣಕ್ಕಿದ್ದ ಕಾನೂನು ತೊಡಕು ಬಗೆಹರಿದಂತಾಗಿದೆ.

Vishwa News 24

Recent Posts

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ : ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ – vishwanews24

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ  ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ  ರುತ್ ಪ್ರಭು ತಾವು ಮೊದಲ…

9 minutes ago

ರನ್‌ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ – vishwanews24

ರನ್‌ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ ಅಹಮದಾಬಾದ್,: ಗುಜರಾತ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್…

22 minutes ago

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು – vishwanews24

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…

31 minutes ago

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಮತ್ತೆ ಆರಂಭ ; ಗುರುತಿನ ಚೀಟಿ, ಶುಲ್ಕ ಕಡ್ಡಾಯ – vishwanews24

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್‌ಸೈಟ್‌ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…

39 minutes ago

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ – vishwanews24

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…

1 hour ago

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

19 hours ago