Featured

ವಿಷ ಪ್ರಸಾದ ದುರಂತ : ಸಂತ್ರಸ್ಥರ ಕುಟುಂಬಕ್ಕೆ 5 ಲಕ್ಷ ಪರಿಹಾರ ಹಾಗೂ ಚಿಕಿತ್ಸೆ ಪಡೆಯುತ್ತಿರುವವರ ಚಿಕಿತ್ಸಾವೆಚ್ಚವನ್ನು ಸರ್ಕಾರವೇ ಭರಿಸಲಿದೆ : ಸಿಎಂ ಕುಮಾರಸ್ವಾಮಿ

ವಿಷ ಪ್ರಸಾದ ದುರಂತ : ಸಂತ್ರಸ್ಥರ ಕುಟುಂಬಕ್ಕೆ 5 ಲಕ್ಷ ಪರಿಹಾರ ಹಾಗೂ ಚಿಕಿತ್ಸೆ ಪಡೆಯುತ್ತಿರುವವರ ಚಿಕಿತ್ಸಾವೆಚ್ಚವನ್ನು ಸರ್ಕಾರವೇ ಭರಿಸಲಿದೆ : ಸಿಎಂ ಕುಮಾರಸ್ವಾಮಿ
ಚಾಮರಾಜನಗರ: ಚಾಮರಾಜನಗರ ವಿಷ ಪ್ರಸಾದ ದುರಂತಕ್ಕೆ ಬಲಿಯಾದವರ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂ ನೀಡುವುದಾಗಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಶುಕ್ರವಾರ ರಾತ್ರಿ ಮೈಸೂರಿನ ಕೆಆರ್ ಆಸ್ಪತ್ರೆಗೆ ಭೇಟಿ ನೀಡಿದ ಕುಮಾರಸ್ವಾಮಿ ಸಂತ್ರಸ್ಥರನ್ನು ಭೇಟಿ ಮಾಡಿದರು. ಈ ವೇಳೆ ಸಿಎಂ ಕುಮಾರಸ್ವಾಮಿ, ಸಚಿವ ಸಿಎಸ್ ಪುಟ್ಟರಾಜು ಕೆ.ಆರ್ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥಗೊಂಡವರ ಆರೋಗ್ಯ ವಿಚಾರಿಸಿ ಕುಟುಂಬಸ್ಥರಿಗೆ ಸಮಾಧಾನ ಹೇಳಿದ್ದಾರೆ. ಅಲ್ಲದೆ ಮೃತರ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಬಳಿಕ ಮಾತನಾಡಿದ ಸಿಎಂ, ದೇವಾಲಯದಲ್ಲಿ ಇಂತಹ ಘಟನೆ ನಡೆದರೆ ಯಾರನ್ನ ನಂಬುವುದು. ಯಾರೇ ಇಂತಹ ಘಟನೆಗಳ ಹಿಂದೆ ಇದ್ದರೂ ಕಠಿಣ ಕ್ರಮ ಜರುಗಿಸುತ್ತೇವೆ. ಎಲ್ಲಾ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವವರಿಗೆ ವೆಚ್ಚವನ್ನ ಸರ್ಕಾರ ಭರಿಸುತ್ತೆ. ಮರಣ ಹೊಂದಿರುವವರ ಅಂತ್ಯಕ್ರಿಯೆಗೆ ಸರ್ಕಾರದಿಂದ ವ್ಯವಸ್ಥೆ ಕಲ್ಪಿಸುತ್ತೇವೆ ಎಂದು ಹೇಳಿದ್ದಾರೆ.
Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago