Featured

ವಿಷ ಪ್ರಸಾದ ಪ್ರಕರಣ – ತಬ್ಬಲಿಯಾದ ಮೂವರು ಮಕ್ಕಳಿಗೆ ಆಸರೆಯಾಗಲು ಮುಂದಾದ ಮೂಡಬಿದ್ರೆಯ ಆಳ್ವಾಸ್ ಸಂಸ್ಥೆ

ಮಂಗಳೂರು: ಸುಳ್ವಾಡಿ ದೇವಸ್ಥಾನದಲ್ಲಿ ಪ್ರಸಾದದಲ್ಲಿ ವಿಷ ಪ್ರಾಶನ ಪ್ರಕರಣದ ದುರಂತದಲ್ಲಿ ತಂದೆ ತಾಯಿಯನ್ನು ಕಳೆದುಕೊಂಡಿರುವ ಮೂರು ಮಕ್ಕಳಿಗೆ ಆಳ್ವಾಸ್ ಸಂಸ್ಥೆ ಆಸರೆಯಾಗಲು ಮುಂದಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆ ಮೂವರು ಮಕ್ಕಳನ್ನು ದತ್ತು ಪಡೆಯಲು ನಿರ್ಧಾರ ಮಾಡಿದ್ದು, ಮೂವರು ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಖರ್ಚನ್ನು ಭರಿಸಲು ಆಳ್ವಾಸ್ ಸಂಸ್ಥೆ ತೀರ್ಮಾನ ಮಾಡಿದೆ. ಅಷ್ಟೇ ಅಲ್ಲದೇ ಉಚಿತ ಶಿಕ್ಷಣ ನೀಡುವುದಾಗಿ ಘೋಷಣೆ ಮಾಡಿದೆ.

ದಂಪತಿಯ ಹಿರಿಯ ಮಗಳು ರಾಣಿಬಾಯಿ ಅವರ ಬಿಎಸ್‌ಸಿ , ಎರಡನೇ ಮಗಳು ಪ್ರಿಯಾಬಾಯಿ ಅವರ ಬಿಎಸ್‌ಸಿ ನರ್ಸಿಂಗ್ ವ್ಯಾಸಂಗ ಹಾಗೂ ಮಗ ರಾಜೇಶ್ ನಾಯ್ಕ್‌ನ ಪಿಯುಸಿ ವ್ಯಾಸಂಗವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಮುಂದುವರಿಸುವುದಾದರೆ ಅವರಿಗೆ ಪದವಿ, ಸ್ನಾತಕೋತ್ತರ ಶಿಕ್ಷಣ ಪಡೆಯಲು ಉಚಿತ ವ್ಯವಸ್ಥೆ ಕಲ್ಪಿಸಲಾಗುವುದು. ಹಾಸ್ಟೆಲ್‌ನಲ್ಲಿ ವಸತಿ ಹಾಗೂ ಊಟದ ವ್ಯವಸ್ಥೆಯನ್ನು ಅವರಿಗೆ ಸಂಪೂರ್ಣವಾಗಿ ಉಚಿತವಾಗಿ ಕೊಡುತ್ತೇವೆ. ಅವರ ವ್ಯಾಸಂಗದ ಬಳಿಕ ಅವರಿಗೆ ಉದ್ಯೋಗ ಕಲ್ಪಿಸುವ ಜವಾಬ್ದಾರಿಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಿಭಾಯಿಸುತ್ತದೆ ಎಂದು ಡಾ.ಎಂ ಮೋಹನ ಆಳ್ವ ಮಾಧ್ಯಮದವರಿಗೆ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago