Featured

ವಿಸ್ಮಯ ನಾಯರ್ ಆತ್ಮಹತ್ಯೆ ಪ್ರಕರಣ : ಪತಿಗೆ 10 ವರ್ಷ ಜೈಲು, 12.5 ಲಕ್ಷ ದಂಡ ವಿಧಿಸಿದ ಕೋರ್ಟ್ – Vishwanews24

ವಿಸ್ಮಯ ನಾಯರ್ ಆತ್ಮಹತ್ಯೆ ಪ್ರಕರಣ : ಪತಿಗೆ 10 ವರ್ಷ ಜೈಲು, 12.5 ಲಕ್ಷ ದಂಡ ವಿಧಿಸಿದ ಕೋರ್ಟ್

ಕೊಲ್ಲಂ: ಪತಿಯ ವರದಕ್ಷಿಣೆ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ವಿಸ್ಮಯ ನಾಯರ್ ಪ್ರಕರಣದಲ್ಲಿ ಆಕೆ ಪತಿ ಕಿರಣ್ ಕುಮಾರ್ ಅವರನ್ನು ದೋಷಿ ಎಂದು ತೀರ್ಪು ನೀಡಿ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 12.5 ಲಕ್ಷ ದಂಡವನ್ನು ವಿಧಿಸಿ ಕೊಲ್ಲಂನ ಹೆಚ್ಚುವರಿ ಸೆಷನ್ಸ್​ ಕೋರ್ಟ್​ ನ್ಯಾಯಾಧೀಶ ಕೆ.ಎನ್​. ಸುಜೀತ್​ ಆದೇಶ ಹೊರಡಿಸಿದ್ದಾರೆ.

ಕಿರಣ್​ ವಿರುದ್ದ ಐಪಿಸಿ 304-ಹತ್ತು ವರ್ಷ, 306-ಆರು ವರ್ಷ, 498-ಎರಡು ವರ್ಷ ಅಡಿಯಲ್ಲಿ 18 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದ್ದು, 12.5 ಲಕ್ಷ ದಂಡ ಪಾವತಿಸಬೇಕಿದೆ. ಇದರಲ್ಲಿ ಎರಡು ಲಕ್ಷ ರೂ. ಅನ್ನು ವಿಸ್ಮಯ ಪೋಷಕರಿಗೆ ನೀಡಬೇಕು ಎಂದು ಕೋರ್ಟ್ ಹೇಳಿದೆ.

ತೀರ್ಪಿನ ಕುರಿತಾಗಿ ಪ್ರತಿಕ್ರಿಯಿಸಿದ ವಿಸ್ಮಯ ತಂದೆ ತ್ರಿವಿಕ್ರಮ್​ ನಾಯರ್​, ಶಿಕ್ಷೆ ವಿಧಿಸಿರುವುದು ಸಮಾಧಾನ ತಂದಿದೆ. ಪೊಲೀಸರು ಹಾಗೂ ಪ್ರಾಸಿಕ್ಯೂಷನ್ ಮತ್ತು ಮಾಧ್ಯಮದವರಿಗೆ ಧನ್ಯವಾದಗಳು. ಜೀವಾವಧಿ ಶಿಕ್ಷೆಯ ನಿರೀಕ್ಷೆಯಲ್ಲಿದ್ದು ತೀರ್ಪಿನಿಂದ ನಿರಾಸೆಯಾಗಿದೆ ಎಂದು ಆಕೆಯ ತಾಯಿ ಸರಿತಾ ಹೇಳಿದ್ದಾರೆ.

ಇನ್ನು 42 ಸಾಕ್ಷಿಗಳು, 102 ದಾಖಲೆಗಳು ಮತ್ತು ಹಲವಾರು ಕರೆ ದಾಖಲೆಗಳನ್ನು ವಿಚಾರಣೆಯ ವೇಳೆ ನ್ಯಾಯಾಲಯದಲ್ಲಿ ಪರಿಶೀಲಿಸಲಾಗಿತ್ತು.

ಆಯುರ್ವೇದ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ವಿಸ್ಮಯಾ, 22, ಜೂನ್ 21, 2021 ರಂದು ಕೊಲ್ಲಂ ಜಿಲ್ಲೆಯ ಸಾಸ್ತಮಕೋಟಾದಲ್ಲಿ ತನ್ನ ಗಂಡನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

5 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

7 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

7 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

7 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

7 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

7 hours ago