ವೀರವನಿತೆ ಒನಕೆ ಓಬವ್ವ ಜಯಂತಿ ; ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ ; ಕನ್ನಡದಲ್ಲಿ ಪ್ರಧಾನಿ ಟ್ವೀಟ್ – Vishwanews24
ವೀರವನಿತೆ ಒನಕೆ ಓಬವ್ವ ಜಯಂತಿ ; ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ ; ಕನ್ನಡದಲ್ಲಿ ಪ್ರಧಾನಿ ಟ್ವೀಟ್ – Vishwanews24
ನವದೆಹಲಿ: ಕನ್ನಡ ನಾಡಿನ ಹೆಮ್ಮೆ ಒನಕೆ ಓಬವ್ವನನ್ನು ಪ್ರಧಾನಿ ನರೇಂದ್ರ ಮೋದಿ ನೆನೆದು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.
ಮೋದಿ ಟ್ವಿಟ್ಟರ್ ನಲ್ಲಿ, ವೀರವನಿತೆ ಒನಕೆ ಓಬವ್ವ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ ಜನರು ಮತ್ತು ಸಂಸ್ಕøತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೋಬ್ಬರೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ ಎಂದು ಕನ್ನಡದಲ್ಲಿ ಬರೆದು ಟ್ವೀಟ್ ಮಾಡಿದ್ದಾರೆ.
ವೀರವನಿತೆ ಒನಕೆ ಓಬವ್ವ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ ಜನರು ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೊಬ್ಬರೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ.
— Narendra Modi (@narendramodi) November 11, 2021
ಇತ್ತೀಚೆಗೆ ಮೋದಿ ಅವರು ಕನ್ನಡದಲ್ಲಿಯೇ ರಾಜ್ಯೋತ್ಸವಕ್ಕೆ ಶುಭಕೋರಿದ್ದು, ಕನ್ನಡಿಗರು ಸಂತೋಷಪಟ್ಟಿದ್ದರು. ಇತ್ತ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡ ಟ್ವಿಟ್ಟರ್ ನಲ್ಲಿ, ನಾಡಿನ ಸಮಸ್ತ ಜನತೆಗೆ ಚಿತ್ರದುರ್ಗದ ವೀರವನಿತೆ ಒನಕೆ ಓಬವ್ವ ಜಯಂತಿಯ ಹಾರ್ದಿಕ ಶುಭಕಾಮನೆಗಳು. ಓಬವ್ವನವರ ಶೌರ್ಯ, ಮಾತೃಭೂಮಿಯ ಮೇಲಿನ ಭಕ್ತಿ ಅನನ್ಯವಾದದ್ದು, ಅವರ, ಧೈರ್ಯ, ಸಾಹಸ ನಮಗೆ ಸ್ಪೂರ್ತಿ ನೀಡುತ್ತದೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ.
ದಕ್ಷಿಣವು ಬಿಜೆಪಿಗೆ ಭರವಸೆಯಾಗಿದೆ, ಕರ್ನಾಟಕ ಒಂದು ಹೆಬ್ಬಾಗಿಲು : ಸಿಎಂ ಬೊಮ್ಮಾಯಿ – Vishwanews24
