ಮುಂಬೈ: ವೀರ್ ಸಾವರ್ಕರ್ ಪ್ರಧಾನಮಂತ್ರಿಯಾಗಿದ್ದರೆ ಪಾಕಿಸ್ಥಾನ ಹುಟ್ಟುತ್ತಿರಲಿಲ್ಲ ಎಂದು ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ತಿಳಿಸಿದ್ದಾರೆ.
ಸಾವರ್ಕರ್ ಜೀವನ ಚರಿತ್ತೆ “ಎಕೋಸ್ ಫ್ರಮ್ ಎ ಫರ್ ಗಾಟನ್ ಫಾಸ್ಟ್” ಬಿಡುಗಡೆ ಸಂದರ್ಭದಲ್ಲಿ ಮಾತನಾಡಿದ ಅವರು ಎನ್ ಡಿ ಎ ಸರಕಾರ ಹಿಂದುತ್ವ ಪರವಾಗಿದ್ದು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ವೀರ್ ಸಾವರ್ಕರ್ ಅವರಿಗೆ ನೀಡಬೇಕೆಂದು ಇದೇ ವೇಳೆ ಒತ್ತಾಯಿಸಿದರು.
ದೇಶದ ಅಭಿವೃದ್ದಿಗಾಗಿ ಮಹಾತ್ಮ ಗಾಂಧೀಜಿ ಮತ್ತು ಭಾರತದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ನೀಡಿದ ಕೊಡುಗೆಯನ್ನು ಎಂದಿಗೂ ಅಲ್ಲಗೆಳೆಯುವುದಿಲ್ಲ, ಆದರೇ ರಾಜಕಾರಣ ಎಂಬುದು ಎರಡು ಕುಟುಂಬಗಳಿಗೆ ಸೀಮಿತವಾಗಬಾರದು. ದೇಶದ ಆಭಿವೃದ್ಧಿಗಾಗಿ ಪಣತೊಡುವವರು ರಾಜಕಾರಣಿಯಾಗಿ ಬರಲು ಅವಕಾಶ ಸಿಗಬೇಕೆಂದು ಎಂದು ಅಭಿಪ್ರಾಯಪಟ್ಟರು. 14 ವರುಷಗಳ ಕಾಲ ಜೈಲಿನಲ್ಲಿದ್ದ ವೀರ್ ಸಾವರ್ಕರ್ ರಂತೆ ಕೇವಲ 14 ನಿಮಿಷ ನೆಹರೂ ಜೈಲಿನಲ್ಲಿದ್ದರೆ ಅವರನ್ನು ‘ವೀರ್’ ಎಂದು ಕರೆಯುತ್ತಿದ್ದೆ ಎಂದು ಇದೇ ವೇಳೆ ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…