ಮಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಿನಿಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವೀರ ಕಂಬಳ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ.
ಈ ಸಿನಿಮಾ ಕನ್ನಡ, ತುಳು ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿ ಬರಲಿರುವುದು ವಿಶೇಷ. ಸಂಪೂರ್ಣವಾಗಿ ಕಂಬಳ ಕ್ರೀಡೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಮೂಡಿ ಬರುತ್ತಿರುವ ಸಿನಿಮಾ ಇದಾಗಿದೆ. ತುಳುನಾಡಿನ ಕೋಣಗಳ ಓಟದ ಹೆಮ್ಮೆಯ ಕಂಬಳ ಸ್ಪರ್ಧೆಯನ್ನು ಕೇಂದ್ರ ಬಿಂದುವಾಗಿಟ್ಟುಕೊಂಡು ತಯಾರಾಗುತ್ತಿರುವ ವೀರ ಕಂಬಳ ಎಂಬ ಸಿನೆಮಾದ ಶೂಟಿಂಗ್ ಭರದಿಂದ ಸಾಗಿದೆ.
ಎಸ್.ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ಬರೋಬ್ಬರಿ 7 ವರ್ಷಗಳ ಕಾಲ ಸಂಶೋಧನೆ ಮಾಡಿ ಕಥೆ ಬರೆಯಲಾಗಿದೆ. ಕನ್ನಡದ ಜೊತೆಗೆ ತೆಲುಗು, ತಮಿಳು, ಹಿಂದಿ ಹಾಗೂ ತುಳು ಭಾಷೆಯಲ್ಲಿ ಕೂಡ ವೀರ ಕಂಬಳ ಸಿನೆಮಾ ತೆರೆ ಕಾಣಲಿದೆ. ತುಳುವಿನಲ್ಲಿ ಈ ಚಿತ್ರಕ್ಕೆ ‘ಬಿರ್ದ್‌ದ ಕಂಬಳ’ ಎಂದು ಹೆಸರಿಡಲಾಗಿದೆ.
ಈವರೆಗೆ ಹಲವು ಚಲನಚಿತ್ರಗಳಲ್ಲಿ ಕಂಬಳವನ್ನು ಚಿತ್ರದ ಭಾಗವಾಗಿ ನೋಡಿದ್ದೇವೆ ಹೊರತು ಸಂಪೂರ್ಣ ಕಂಬಳದ ಬಗ್ಗೆ ಚಿತ್ರ ಬಂದಿಲ್ಲ. ವೀರ ಕಂಬಳ ಎಂಬ ಸಿನೆಮಾ ಕಂಬಳ ಎಂಬ ಜಾನಪದ ಕ್ರೀಡೆಯನ್ನು ಕೇಂದ್ರವಾಗಿ ಇಟ್ಟುಕೊಂಡು ಮೂಡಿಬಂದಿರುವ ಚಿತ್ರವಾಗಿದೆ. ಈ ಚಿತ್ರಕ್ಕೆ ಅರುಣ್ ರೈ ತೋಡಾರ್ ಎಂಬವರು ಬಂಡವಾಳ ಹೂಡಿದ್ದಾರೆ.
‘ವೀರ ಕಂಬಳ’ ಚಿತ್ರದ ಕೊನೆ ಹಂತದ ಚಿತ್ರೀಕರಣ ಸದ್ಯ ನಡೆಯುತ್ತಿದ್ದು, ಈ ಚಿತ್ರಕ್ಕಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಬಣ್ಣ ಹಚ್ಚುತ್ತಿರುವ ಫೋಟೋ ಸಖತ್ ವೈರಲ್ ಆಗಿದೆ. ತುಳುನಾಡಿನ ಪ್ರಸಿದ್ಧ ಕಲಾವಿದರು ಕೂಡ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದು, ಇದರ ಜೊತೆಗೆ ಪ್ರಕಾಶ್ ರಾಜ್, ಆರ್ಮುಗ ರವಿಶಂಕರ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬರಲಿದ್ದು, ವೀರ ಕಂಬಳ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಈಗ ನಡೆಯುತ್ತಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…