Featured

ವೀರ ಕಂಬಳ’ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ – Vishwanews24

ವೀರ ಕಂಬಳ’ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಿನಿಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವೀರ ಕಂಬಳ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ.

ಈ ಸಿನಿಮಾ ಕನ್ನಡ, ತುಳು ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿ ಬರಲಿರುವುದು ವಿಶೇಷ. ಸಂಪೂರ್ಣವಾಗಿ ಕಂಬಳ ಕ್ರೀಡೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಮೂಡಿ ಬರುತ್ತಿರುವ ಸಿನಿಮಾ ಇದಾಗಿದೆ. ತುಳುನಾಡಿನ ಕೋಣಗಳ ಓಟದ ಹೆಮ್ಮೆಯ ಕಂಬಳ ಸ್ಪರ್ಧೆಯನ್ನು ಕೇಂದ್ರ ಬಿಂದುವಾಗಿಟ್ಟುಕೊಂಡು ತಯಾರಾಗುತ್ತಿರುವ ವೀರ ಕಂಬಳ ಎಂಬ ಸಿನೆಮಾದ ಶೂಟಿಂಗ್ ಭರದಿಂದ ಸಾಗಿದೆ.

ಎಸ್‌.ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ಬರೋಬ್ಬರಿ 7 ವರ್ಷಗಳ ಕಾಲ ಸಂಶೋಧನೆ ಮಾಡಿ ಕಥೆ ಬರೆಯಲಾಗಿದೆ. ಕನ್ನಡದ ಜೊತೆಗೆ ತೆಲುಗು, ತಮಿಳು, ಹಿಂದಿ ಹಾಗೂ ತುಳು ಭಾಷೆಯಲ್ಲಿ ಕೂಡ ವೀರ ಕಂಬಳ ಸಿನೆಮಾ ತೆರೆ ಕಾಣಲಿದೆ. ತುಳುವಿನಲ್ಲಿ ಈ ಚಿತ್ರಕ್ಕೆ ‘ಬಿರ್ದ್‌ದ ಕಂಬಳ’ ಎಂದು ಹೆಸರಿಡಲಾಗಿದೆ.

ಈವರೆಗೆ ಹಲವು ಚಲನಚಿತ್ರಗಳಲ್ಲಿ ಕಂಬಳವನ್ನು ಚಿತ್ರದ ಭಾಗವಾಗಿ ನೋಡಿದ್ದೇವೆ ಹೊರತು ಸಂಪೂರ್ಣ ಕಂಬಳದ ಬಗ್ಗೆ ಚಿತ್ರ ಬಂದಿಲ್ಲ. ವೀರ ಕಂಬಳ ಎಂಬ ಸಿನೆಮಾ ಕಂಬಳ ಎಂಬ ಜಾನಪದ ಕ್ರೀಡೆಯನ್ನು ಕೇಂದ್ರವಾಗಿ ಇಟ್ಟುಕೊಂಡು ಮೂಡಿಬಂದಿರುವ ಚಿತ್ರವಾಗಿದೆ. ಈ ಚಿತ್ರಕ್ಕೆ ಅರುಣ್ ರೈ ತೋಡಾರ್ ಎಂಬವರು ಬಂಡವಾಳ ಹೂಡಿದ್ದಾರೆ.

‘ವೀರ ಕಂಬಳ’ ಚಿತ್ರದ ಕೊನೆ ಹಂತದ ಚಿತ್ರೀಕರಣ ಸದ್ಯ ನಡೆಯುತ್ತಿದ್ದು, ಈ ಚಿತ್ರಕ್ಕಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಬಣ್ಣ ಹಚ್ಚುತ್ತಿರುವ ಫೋಟೋ ಸಖತ್ ವೈರಲ್ ಆಗಿದೆ. ತುಳುನಾಡಿನ ಪ್ರಸಿದ್ಧ ಕಲಾವಿದರು ಕೂಡ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದು, ಇದರ ಜೊತೆಗೆ ಪ್ರಕಾಶ್ ರಾಜ್, ಆರ್ಮುಗ ರವಿಶಂಕರ್‌ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬರಲಿದ್ದು, ವೀರ ಕಂಬಳ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಈಗ ನಡೆಯುತ್ತಿದೆ.

Vishwa News 24

Recent Posts

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ – vishwanews24

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ  ಮಂಗಳೂರು: ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ)ಯ ಮುಂಭಾಗದಲ್ಲಿ…

59 minutes ago

ತುಳು ಲಿಪಿಗೆ ಡಿಜಿಟಲ್ ಸ್ಪರ್ಶ: ಸ್ಮಾರ್ಟ್‌ಫೋನ್‌ಗಳಲ್ಲಿ ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ – vishwanews24

ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…

1 hour ago

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ – vishwanews24

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…

1 hour ago

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ – vishwanews24

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…

1 hour ago

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು – vishwanews24

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…

2 hours ago

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ – vishwanews24

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ…

2 hours ago