Featured

ವೃದ್ದಾಪ್ಯ ವೇತನ 2000 ಹಾಗೂ ಅಂಗವಿಕಲರ ಮಾಸಾಶನ 2500ವರೆಗೆ ಏರಿಕೆ : ಕುಮಾರಸ್ವಾಮಿ -Vishwanews24

ರಾಯಚೂರು,: ವೃದ್ದಾಪ್ಯ ವೇತನವನ್ನು 1000 ರಿಂದ ಎರಡು ಸಾವಿರಕ್ಕೆ ಹಾಗೂ ಅಂಗವಿಕಲರ ಮಾಸಾಶನವನ್ನು 2500 ವರೆಗೆ ಏರಿಸಲಾಗುವುದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ರಾಯಚೂರಿನ ಕರೆಗುಡ್ಡ ಗ್ರಾಮದಲ್ಲಿ ಗ್ರಾಮ ವಾಸ್ತವ್ಯದ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು ಈ ಭರವಸೆ ನೀಡಿದ್ದು, ಮುಂದಿನ ವರ್ಷದಿಂದ ಇದು ಜಾರಿಗೆ ಬರಲಿದೆ ಎಂದಿದ್ದಾರೆ.

ಈ ಮೊದಲು ಹಿರಿಯ ನಾಗರಿಕರಿಗೆ ಇದ್ದ 600ಮಾಸಾಶನವನ್ನು‌1 ಸಾವಿರಕ್ಕೆ ಹೆಚ್ಚಿಸಿದ್ದೆ. ಈಗ ಅದನ್ನು 2 ಸಾವಿರಕ್ಕೆ ಹಾಗೂ ವಿಕಲಚೇತನರೂ ನೆಮ್ಮದಿಯಿಂದ ಇರಬೇಕು ಎಂಬ ದೃಷ್ಟಿಯಿಂದ ಅವರ ಮಾಸಾಶನವನ್ನು 2500ಕ್ಕೆ ಹೆಚ್ಚಿಸಲು ನಿರ್ಧರಿಸಿದ್ದೇನೆ ಎಂದರು.

ಕೃಷಿ ಅಭಿವೃದ್ಧಿಗೆ ಸರಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದ್ದು, ಕೃಷಿಕರು ಸುಸ್ಥಿರ ಬದುಕು ರೂಪಿಸಿಕೊಳ್ಳುವುದಕ್ಕೆ ಮುಂದಾಗಬೇಕು ಎಂದ ಅವರು, ಎನ್ ಪಿಎಸ್ ನೌಕಕರ ನೋವು ನನಗೆ ಅರ್ಥವಾಗಿದ್ದು, ಎನ್ ಪಿಎಸ್ ರದ್ದು ಮಾಡಬೇಕೇ ಬೇಡವೇ ಎಂಬುದಕ್ಕೆ ಸಂಬಂಧಿಸಿದಂತೆ ಸಮಿತಿ ರಚಿಸಲಾಗಿದ್ದು, ವರದಿ ಬಂದ ತಕ್ಷಣ ತಮ್ಮನ್ನು ಕರೆದು ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ರೈತರ ಸಾಲಮನ್ನಾ ವಿಷಯಕ್ಕೆ ಸಂಬಂಧಿಸಿದಂತೆ ಅನಗತ್ಯ ಟೀಕೆ ಮಾಡುವ ಪ್ರತಿಪಕ್ಷಗಳಿಗೆ ತಮ್ಮ ಶೈಲಿಯಲ್ಲಿಯೇ ಚಾಟಿ ಬಿಸಿದ ಸಿಎಂ ಅವರು ರಾಯಚೂರು ಜಿಲ್ಲೆಯಲ್ಲಿ 272.22ಕೋಟಿ ರೂ. ರೈತರ ಸಾಲಮನ್ನಾಗೆ ಇದುವರೆಗೆ ರಾಯಚೂರು ಜಿಲ್ಲೆಗೆ ಸಂದಾಯ ಮಾಡಲಾಗಿದೆ ಎಂದು ಹೇಳಿದರು. ಪ್ರಾಮಾಣಿಕವಾಗಿ ರೈತರ ಸಾಲಮನ್ನಾಗೆ ಹಾಗೂ ರೈತರ ಕಲ್ಯಾಣಕ್ಕೆ ಶ್ರಮಿಸುತ್ತಿರುವುದಾಗಿ ತಿಳಿಸಿದ ಸಿಎಂ ಕುಮಾರಸ್ವಾಮಿ ಅವರು ರೈತರ ಸಾಲಮನ್ನಕ್ಕಾಗಿ ಒಂದು ವರ್ಷದಲ್ಲಿಯೇ 25ಸಾವಿರ ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago