ಮಂಗಳೂರು: ಮಂಗಳೂರು ಕ್ರೈಸ್ತ ಧರ್ಮಪ್ರಾಂತದ ವಿಟ್ಲದ ಪರಿಯಾಲ್ತಡ್ಕ ಮನೇಲಾದ ಕ್ರೈಸ್ಟ್ ದಿ ಕಿಂಗ್ ಚರ್ಚ್ ವ್ಯಾಪ್ತಿಯಲ್ಲಿ ನಡೆದಿರುವ ಘಟನೆಯಿಂದ ನೋವಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿತ ಪಾದ್ರಿಯನ್ನು ಸಂಬಂಧಪಟ್ಟ ಚರ್ಚ್ ನ ಧಾರ್ಮಿಕ ಹುದ್ದೆಯಿಂದ ತಕ್ಷಣದಿಂದ ಅನ್ವಯವಾಗುವಂತೆ ತೆರವುಗೊಳಿಸುತ್ತಿರುವುದಾಗಿ ಮಂಗಳೂರು ಕ್ರೈಸ್ತ ಧರ್ಮಪ್ರಾಂತ(ಡಯಾಸಿಸ್ ಆಫ್ ಮಂಗಳೂರು)ದ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ಫಾ.ಜೆ.ಬಿ.ಸಲ್ದಾನ ಮತ್ತು ರೊನಾಲ್ಡ್ ಕ್ಯಾಸ್ತಲಿನೊ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪ್ರಕರಣದ ಬಗ್ಗೆ ವಿಷಾದ ವ್ಯಕ್ತಪಡಿಸುತ್ತಿದ್ದೇವೆ. ಈ ಪ್ರಕರಣ ದೇಶದ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ್ದಾಗಿದೆ. ಈ ಕುರಿತಾಗಿ ಕಾನೂನು ಕ್ರಮ ಕೈಗೊಳ್ಳುತ್ತಿರುವ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಲಾಗುವುದು. ಸರಕಾರಿ ಇಲಾಖೆಗಳು ಆರಂಭಿಸಿರುವ ತನಿಖೆಯ ಜತೆಗೆ ಪ್ರಕರಣದ ಸತ್ಯಾಸತ್ಯತೆಯನ್ನು ಪತ್ತೆ ಹಚ್ಚಲು ಕ್ರೈಸ್ತ ಧರ್ಮಪ್ರಾಂತದ ಆಂತರಿಕ ಸಮಿತಿಯೂ ವಿಚಾರಣೆ ನಡೆಸಲಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪರಿಯಾಲ್ತಡ್ಕ ಮನೇಲಾದ ಕ್ರೈಸ್ಟ್ ದಿ ಕಿಂಗ್ ಚರ್ಚ್ ನ ಪಾದ್ರಿ ನೆಲ್ಸನ್ ಒಲಿವೆರಾ ಎಂಬವರು ಫೆ.29ರಂದು ಬೆಳಗ್ಗೆ ವೃದ್ಧ ದಂಪತಿಯೊಂದರ ಮೇಲೆ ತೀವ್ರವಾಗಿ ಹಲ್ಲೆ ಮಾಡಿದ್ದರೆನ್ನಲಾದ ಸಿಸಿಟಿವಿ ವೀಡಿಯೊ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪಾದ್ರಿಯು ವೃದ್ಧರೊಬ್ಬರಿಗೆ ಹಲ್ಲೆ ನಡೆಸಿದ್ದಲ್ಲದೆ, ಕುತ್ತಿಗೆ ಪಟ್ಟಿ ಹಿಡಿದು ಎಳೆದೊಯ್ದು ತೀವ್ರ ಹಲ್ಲೆ ನಡೆಸಿರುವುದು, ಪತಿಯ ರಕ್ಷಣೆಗೆ ಮುಂದಾದ ವೃದ್ಧ ಮಹಿಳೆಗೂ ಪಾದ್ರಿ ಒದೆಯುವುದು ವೀಡಿಯೊದಲ್ಲಿ ಸೆರೆಯಾಗಿದೆ.
ಈ ವಿಚಾರವಾಗಿ ಸಂತ್ರಸ್ತ ದಂಪತಿ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…
ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…
ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…
ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…
ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಉಡುಪಿ…
ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ…