Featured

ವೇಣೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 3.30 ಲಕ್ಷ ರೂ. ಪಡೆದು ವಂಚನೆ – Vishwanews24

ವೇಣೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 3.30 ಲಕ್ಷ ರೂ. ಪಡೆದು ವಂಚನೆ

ವೇಣೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 3.30 ಲಕ್ಷ ರೂ. ಪಡೆದು ವಂಚಿಸಿರುವ ಬಗ್ಗೆ ಇಬ್ಬರು ಆರೋಪಿಗಳ ವಿರುದ್ಧ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾರಾವಿಯ ಅಟ್ಯಡ್ಕ ನಿವಾಸಿ ಲಿಯೋ ಪಾಯಸ್‌ ವಂಚನೆಗೊಳಗಾದವರು.

ಪ್ರಕರಣದ ಓರ್ವ ಆರೋಪಿ ತಲೆಮರೆಸಿಕೊಂಡಿದ್ದು, ಮತ್ತೋರ್ವ ಆರೋಪಿಯನ್ನು ಮಂಗಳೂರಿನ ಸುಧೀರ್‌ ಎಂದು ಗುರುತಿಸಲಾಗಿದ್ದು, ಈತನ ಮೇಲೇ ಈಗಾಗಲೇ ಬಂಟ್ವಾಳ ನಗರ, ಗ್ರಾಮಾಂತರ, ಮೂಡುಬಿದಿರೆ, ಮಂಗಳೂರು ಸೇರಿದಂತೆ ಹಲವು ಠಾಣೆಗಳಲ್ಲಿ ಕೇಸುಗಳಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ.
ಆರೋಪಿಗಳಿಬ್ಬರು ಜ. 18ರಂದು ನಾರಾವಿಯ ಅಟ್ಯಡ್ಕ ನಿವಾಸಿ ಲಿಯೋ ಪಾಯಸ್‌ರವರ ಮನೆಗೆ ಬಂದು ಅವರ ಪುತ್ರ ಸುರೇಶ್‌ ಪಾಯಸ್‌ಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಾತುಕತೆ ನಡೆಸಿದ್ದಾರೆ.

ಈ ಬಗ್ಗೆ 1.25 ಲಕ್ಷ ರೂ. ನಗದು ಪಡೆದು ಬಳಿಕ ವಿವಿಧ ಹಂತಗಳಲ್ಲಿ 1.37 ಲಕ್ಷ ರೂ., 40 ಸಾವಿರ, 28 ಸಾವಿರ ರೂ. ನಗದನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಆರೋಪಿಗಳು ಬಳಿಕ ಸುರೇಶ್‌ ಪಾಯಸ್‌ಗೆ ಮೊಬೈಲ್‌ ಮೂಲಕ ಬಲ್ಗೇರಿಯಾಕ್ಕೆ ವಿಮಾನ ಟಿಕೆಟ್‌ ಬುಕ್‌ ಮಾಡಿದ ನಕಲಿಪ್ರತಿಯನ್ನು ವಾಟ್ಸ್‌ ಆ್ಯಪ್‌ನಲ್ಲಿ ಕಳುಹಿಸಿರುವ ಆರೋಪಿಗಳು ಮುಂಬಯಿಗೆ ಬರುವಂತೆ ತಿಳಿಸಿದ್ದಾರೆ. ಅದರಂತೆ ಸುರೇಶ್‌ ಪಾಯಸ್‌ ಮುಂಬಯಿಗೆ ತೆರಳಿದ್ದು, ಅಲ್ಲಿ ಆರೋಪಿಗಳು ವೀಸಾ ಹಾಗೂ ವಿದೇಶಿ ಕರೆನ್ಸಿ ತರುವುದಾಗಿ ಹೇಳಿ ಹೋದವರು ಮರಳದೇ ವಂಚಿಸಿದ್ದಾರೆ.

ಈ ಬಗ್ಗೆ ಕಳೆದ ಮಾರ್ಚ್‌ ತಿಂಗಳಲ್ಲಿ ಲಿಯೋ ಪಾಯಸ್‌ರವರ ಮೊಬೈಲ್‌ಗೆ ಮೆಸೇಜ್‌ ಮಾಡಿ ನಿಮ್ಮ ಪುತ್ರನ ಟಿಕೆಟ್‌ ಕ್ಯಾನ್ಸಲ್‌ ಆಗಿದ್ದು, ಹಣ ಮತ್ತು ಪಾಸ್‌ಪೋರ್ಟನ್ನು ಕೊರಿಯರ್‌ ಮೂಲಕ ಕಳುಹಿಸುವುದಾಗಿ ತಿಳಿಸಿ ಪಾಸ್‌ಪೋರ್ಟ್‌ ಮಾತ್ರ ಕಳುಹಿಸಿ ವಂಚಿಸಿದ್ದರು.

ಪ್ರಕರಣದ ಓರ್ವ ಆರೋಪಿ ಈಗಾಗಲೇ ಬಂಧನ ದಲ್ಲಿದ್ದು, ಮತ್ತೋರ್ವ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago