Featured

ವೇಣೂರು ಸುಡುಮದ್ದು ಘಟಕದಲ್ಲಿ ಸ್ಪೋಟ ಪ್ರಕರಣ: ಮಾಲೀಕ ಪೊಲೀಸರ ವಶಕ್ಕೆ – vishwanews24

ವೇಣೂರು ಸುಡುಮದ್ದು ಘಟಕದಲ್ಲಿ ಸ್ಪೋಟ ಪ್ರಕರಣ: ಮಾಲೀಕ ಪೊಲೀಸರ ವಶಕ್ಕೆ

ವೇಣೂರು : ವೇಣೂರು ಪೊಲೀಸ್ ಠಾಣೆಯ ಕುಕ್ಕೇಡಿ ಗ್ರಾ.ಪಂಚಾಯತ್ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಎಂಬಲ್ಲಿಸುಡುಮದ್ದು ತಯಾರಿ ಘಟಕದಲ್ಲಿ ಭಾನುವಾರ ಸಂಜೆ ಸ್ಪೋಟ ಸಂಭವಿಸಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕ ಸೈಯದ್ ಬಶೀರ್ ಪೊಲೀಸ್ ವಶಕ್ಕೆ ಪಡೆಯಲಾಗಿದೆ.

ವೇಣೂರು ಪೊಲೀಸ್ ಠಾಣೆಯಲ್ಲಿ ಶಾಂತಿ ಎಂಬವರು ನೀಡಿದ ದೂರಿನ ಮೇಲೆ ಮಾಲೀಕ ಬಶೀರ್‌ ಮೇಲೆ ಎಫ್ಐಆರ್ ದಾಖಲಾಗಿದೆ‌.

ಪ್ರಕರಣ ಸಂಬಂಧ ಜಾಗ ಹಾಗೂ ಪಟಾಕಿ ತಯಾರಿಕಾ ಮಾಲೀಕ ಸೈಯದ್ ಬಶೀರ್ ಘಟನೆ ಬಳಿಕ ವೇಣೂರಿನಿಂದ ಪರಾರಿಯಾಗಿದ್ದಾಗ ಖಚಿತ ಮಾಹಿತಿ ಮೇರೆಗೆ ಸುಳ್ಯದಲ್ಲಿ ವಶಕ್ಕೆ ಪಡೆದುಕೊಂಡು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ಭಾನುವರ 5.15ರ ಸುಮಾರಿಗೆ ಈ ದುರಂತ ನಡೆದಿದ್ದು, ಕೇರಳದವರಾದ ಸ್ವಾಮಿ (55), ವರ್ಗೀಸ್‌ (68), ಹಾಸದ ಅರಸೀಕೆರೆ ಮೂಲದ ಚೇತನ್‌ (25) ಎಂಬ ಮೂವರು ಮೃತರಾಗಿದ್ದು, ಘಟನೆ ನಡೆದ ಬಳಿಕ ಉಳಿದ ಕಾರ್ಮಿಕರು, ಮಾಲೀಕ ಪರಾರಿಯಾಗಿದ್ದರು.

ದೂರಿನಲ್ಲೇನಿದೆ?

ಬಶೀರ್‌ ಎಂಬಾತನು ತನ್ನ ತೋಟದ ಶೆಡ್‌ನಲ್ಲಿ, ಕೇರಳ ಮೂಲದ 3 ಜನ ಹಾಗೂ ಹಾಸನ ಮೂಲದ 6 ಜನರನ್ನು ಸೇರಿಸಿಕೊಂಡು, ಸ್ಪೋಟಕ ವಸ್ತುಗಳ ನುರಿತ ಕಾಮಗಾರಿಗಳನ್ನು ತಯಾರಿಸುವ ವ್ಯಕ್ತಿಗಳನ್ನು ನಿಯೋಜಿಸದೆ ಹಾಗೂ ಸ್ಪೋಟಕ ವಸ್ತುಗಳು ಸಿಡಿದರೆ ಜೀವಹಾನಿ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟಾಗುತ್ತದೆ ಎಂದು ತಿಳಿದಿದ್ದರೂ, ಯಾವುದೇ ಮುಂಜಾಗ್ರತೆ ಕ್ರಮ ವಹಿಸದೆ ನಿರ್ಲಕ್ಷತನದಿಂದ ಕಾಮಗಾರಿ ನಡೆಸುವಾಗ, ಸ್ಪೋಟಕ ವಸ್ತುವಿನಲ್ಲಿ ಬೆಂಕಿ ಕಾಣಿಸಿ ಸ್ಪೋಟಗೊಂಡ ಪರಿಣಾಮ, ಕೆಲಸ ಮಾಡುತ್ತಿದ್ದ ಮೂವರು ಮೃತಪಟ್ಟಿದ್ದು, ಇದರ ವಿರುದ್ದ ಸಸೂಕ್ತ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಲಾಗಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

8 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

9 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

9 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

10 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

10 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

10 hours ago