ವೇಣೂರು : ವೇಣೂರು ಪೊಲೀಸ್ ಠಾಣೆಯ ಕುಕ್ಕೇಡಿ ಗ್ರಾ.ಪಂಚಾಯತ್ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಎಂಬಲ್ಲಿಸುಡುಮದ್ದು ತಯಾರಿ ಘಟಕದಲ್ಲಿ ಭಾನುವಾರ ಸಂಜೆ ಸ್ಪೋಟ ಸಂಭವಿಸಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕ ಸೈಯದ್ ಬಶೀರ್ ಪೊಲೀಸ್ ವಶಕ್ಕೆ ಪಡೆಯಲಾಗಿದೆ.
ವೇಣೂರು ಪೊಲೀಸ್ ಠಾಣೆಯಲ್ಲಿ ಶಾಂತಿ ಎಂಬವರು ನೀಡಿದ ದೂರಿನ ಮೇಲೆ ಮಾಲೀಕ ಬಶೀರ್ ಮೇಲೆ ಎಫ್ಐಆರ್ ದಾಖಲಾಗಿದೆ.
ಪ್ರಕರಣ ಸಂಬಂಧ ಜಾಗ ಹಾಗೂ ಪಟಾಕಿ ತಯಾರಿಕಾ ಮಾಲೀಕ ಸೈಯದ್ ಬಶೀರ್ ಘಟನೆ ಬಳಿಕ ವೇಣೂರಿನಿಂದ ಪರಾರಿಯಾಗಿದ್ದಾಗ ಖಚಿತ ಮಾಹಿತಿ ಮೇರೆಗೆ ಸುಳ್ಯದಲ್ಲಿ ವಶಕ್ಕೆ ಪಡೆದುಕೊಂಡು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ಭಾನುವರ 5.15ರ ಸುಮಾರಿಗೆ ಈ ದುರಂತ ನಡೆದಿದ್ದು, ಕೇರಳದವರಾದ ಸ್ವಾಮಿ (55), ವರ್ಗೀಸ್ (68), ಹಾಸದ ಅರಸೀಕೆರೆ ಮೂಲದ ಚೇತನ್ (25) ಎಂಬ ಮೂವರು ಮೃತರಾಗಿದ್ದು, ಘಟನೆ ನಡೆದ ಬಳಿಕ ಉಳಿದ ಕಾರ್ಮಿಕರು, ಮಾಲೀಕ ಪರಾರಿಯಾಗಿದ್ದರು.
ದೂರಿನಲ್ಲೇನಿದೆ?
ಬಶೀರ್ ಎಂಬಾತನು ತನ್ನ ತೋಟದ ಶೆಡ್‌ನಲ್ಲಿ, ಕೇರಳ ಮೂಲದ 3 ಜನ ಹಾಗೂ ಹಾಸನ ಮೂಲದ 6 ಜನರನ್ನು ಸೇರಿಸಿಕೊಂಡು, ಸ್ಪೋಟಕ ವಸ್ತುಗಳ ನುರಿತ ಕಾಮಗಾರಿಗಳನ್ನು ತಯಾರಿಸುವ ವ್ಯಕ್ತಿಗಳನ್ನು ನಿಯೋಜಿಸದೆ ಹಾಗೂ ಸ್ಪೋಟಕ ವಸ್ತುಗಳು ಸಿಡಿದರೆ ಜೀವಹಾನಿ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟಾಗುತ್ತದೆ ಎಂದು ತಿಳಿದಿದ್ದರೂ, ಯಾವುದೇ ಮುಂಜಾಗ್ರತೆ ಕ್ರಮ ವಹಿಸದೆ ನಿರ್ಲಕ್ಷತನದಿಂದ ಕಾಮಗಾರಿ ನಡೆಸುವಾಗ, ಸ್ಪೋಟಕ ವಸ್ತುವಿನಲ್ಲಿ ಬೆಂಕಿ ಕಾಣಿಸಿ ಸ್ಪೋಟಗೊಂಡ ಪರಿಣಾಮ, ಕೆಲಸ ಮಾಡುತ್ತಿದ್ದ ಮೂವರು ಮೃತಪಟ್ಟಿದ್ದು, ಇದರ ವಿರುದ್ದ ಸಸೂಕ್ತ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಲಾಗಿದೆ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…