ಬೀದರ್: ಸಂತಾನಹರಣ ಶಸ್ತ್ರಚಿಕಿತ್ಸೆಗೆಂದು ದಾಖಲಾಗಿದ್ದ ಬಾಣಂತಿ ಸಾವನ್ನಪ್ಪಿದ ಘಟನೆ ಬೀದರ್‌ನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದಾಗಿ ಮಗಳು ಮೃತಪಟ್ಟಿರುವುದಾಗಿ ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ.
ಚಿಮಕೋಡ್ ಗ್ರಾಮದ 26 ವರ್ಷದ ಮೀನಾಕ್ಷಿ ಮೃತ ಬಾಣಂತಿ.
ಮಂಗಳವಾರ (ಜ.20) ಸಂತಾನಹರಣ ಶಸ್ತ್ರಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆ ಬಳಿಕ ಬಾಣಂತಿ ಶೌಚಾಲಯಕ್ಕೆ ತೆರಳುವಾಗ ಕುಸಿದು ಬಿದ್ದಿದ್ದು, ಈ ವೇಳೆ ವೈದ್ಯರು ಇಂಜೆಕ್ಷನ್ ನೀಡಿದ್ದರು. ಅದಾದ ಬಳಿಕ ಬಾಣಂತಿ ಆರೋಗ್ಯದಲ್ಲಿ ಮತ್ತಷ್ಟು ಏರುಪೇರಾಗಿದ್ದು, ಬ್ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಂತೆ ತಿಳಿಸಿದ್ದರು. ಬ್ರಿಮ್ಸ್ ವೈದ್ಯರು ಪರೀಕ್ಷಿಸಿದಾಗ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.
ಮೃತಳ ಕುಟುಂಬಸ್ಥರು ಖಾಸಗಿ ಆಸ್ಪತ್ರೆಯ ಎದುರು ಶವವಿಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಬಾಣಂತಿ ಸಾವಿಗೆ ಕಾರಣವೆಂದು ಆರೋಪ ಮಾಡಿದ್ದು, ಸಾವಿಗೆ ನ್ಯಾಯ ಒದಗಿಸಿಕೊಡುವಂತೆ ಒತ್ತಾಯ ಮಾಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…