Featured

ವೈದ್ಯರ ನಿರ್ಲಕ್ಷ್ಯ ಆರೋಪ : ಸಂತಾನಹರಣ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿ ಸಾವು – vishwanews24

ವೈದ್ಯರ ನಿರ್ಲಕ್ಷ್ಯ ಆರೋಪ : ಸಂತಾನಹರಣ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿ ಸಾವು

ಆಸ್ಪತ್ರೆ ಮುಂದೆ ಶವವಿಟ್ಟು ಕುಟುಂಬಸ್ಥರ ಪ್ರತಿಭಟನೆ

ಬೀದರ್: ಸಂತಾನಹರಣ ಶಸ್ತ್ರಚಿಕಿತ್ಸೆಗೆಂದು ದಾಖಲಾಗಿದ್ದ ಬಾಣಂತಿ ಸಾವನ್ನಪ್ಪಿದ ಘಟನೆ ಬೀದರ್‌ನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದಾಗಿ ಮಗಳು ಮೃತಪಟ್ಟಿರುವುದಾಗಿ ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ.

ಚಿಮಕೋಡ್ ಗ್ರಾಮದ 26 ವರ್ಷದ ಮೀನಾಕ್ಷಿ ಮೃತ ಬಾಣಂತಿ.

ಮಂಗಳವಾರ (ಜ.20) ಸಂತಾನಹರಣ ಶಸ್ತ್ರಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆ ಬಳಿಕ ಬಾಣಂತಿ ಶೌಚಾಲಯಕ್ಕೆ ತೆರಳುವಾಗ ಕುಸಿದು ಬಿದ್ದಿದ್ದು, ಈ ವೇಳೆ ವೈದ್ಯರು ಇಂಜೆಕ್ಷನ್ ನೀಡಿದ್ದರು. ಅದಾದ ಬಳಿಕ ಬಾಣಂತಿ ಆರೋಗ್ಯದಲ್ಲಿ ಮತ್ತಷ್ಟು ಏರುಪೇರಾಗಿದ್ದು, ಬ್ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಂತೆ ತಿಳಿಸಿದ್ದರು. ಬ್ರಿಮ್ಸ್ ವೈದ್ಯರು ಪರೀಕ್ಷಿಸಿದಾಗ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

ಮೃತಳ ಕುಟುಂಬಸ್ಥರು ಖಾಸಗಿ ಆಸ್ಪತ್ರೆಯ ಎದುರು ಶವವಿಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಬಾಣಂತಿ ಸಾವಿಗೆ ಕಾರಣವೆಂದು ಆರೋಪ ಮಾಡಿದ್ದು, ಸಾವಿಗೆ ನ್ಯಾಯ ಒದಗಿಸಿಕೊಡುವಂತೆ ಒತ್ತಾಯ ಮಾಡಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

2 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

2 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

2 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

3 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

3 hours ago