ನವದೆಹಲಿ: ದೆಹಲಿ ಪೊಲೀಸರು ವೈದ್ಯರ ಮೇಲೆ ನಡೆಸಿದ ದೌರ್ಜನ್ಯವನ್ನು ವಿರೋಧಿಸಿ ಡಿಸೆಂಬರ್ 29ರಂದು ಬೆಳಿಗ್ಗೆ 8 ರಿಂದ ದೇಶಾದ್ಯಂತ ಎಲ್ಲ ಆರೋಗ್ಯ ಸೇವೆಗಳಿಂದ ಸಂಪೂರ್ಣ ಹಿಂತೆಗೆದುಕೊಳ್ಳುವಂತೆ ಫೆಡರೇಷನ್ ಆಫ್ ಆಲ್ ಇಂಡಿಯಾ ಮೆಡಿಕಲ್ ಅಸೋಸಿಯೇಷನ್ ಕರೆ ನೀಡಿದೆ ಎಂದು ತಿಳಿದು ಬಂದಿದೆ.
ವೈದ್ಯರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯ ಸಮಯದಲ್ಲಿ ಮಹಿಳಾ ವೈದ್ಯರನ್ನು ಪುರುಷ ಪೊಲೀಸ್ ಸಿಬ್ಬಂದಿ ಕ್ರೂರವಾಗಿ ಥಳಿಸಿ ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಎಫ್‌ಎಐಎಂಎ ತಿಳಿಸಿದೆ.
ಇನ್ನು ನೀಟ್-ಪಿಜಿ 2021 ಕೌನ್ಸೆಲಿಂಗ್ ವಿಳಂಬದ ಬಗ್ಗೆ ದೆಹಲಿಯಲ್ಲಿ ಹೆಚ್ಚಿನ ಸಂಖ್ಯೆಯ ನಿವಾಸಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದು, ಸೋಮವಾರ ರಸ್ತೆಯಲ್ಲಿ ಪೊಲೀಸರು ಮತ್ತು ವೈದ್ಯರ ನಡುವೆ ಘರ್ಷಣೆ ನಡೆದಿದೆ. ಅನೇಕ ಜನರು ಬೀದಿ ಬದಿಯಲ್ಲಿ ಗಾಯಗೊಂಡಿದ್ದರು ಎಂದು ಹೇಳಿದೆ.
ಪೊಲೀಸರ ಈ ದೌರ್ಜನ್ಯವನ್ನು ಖಂಡಿಸಿ ದೇಶಾದ್ಯಂತ ಡಿಸೆಂಬರ್ 29 ರಂದು ಎಲ್ಲಾ ಆರೋಗ್ಯ ಸೇವೆಗಳನ್ನು ಸಂಪೂರ್ಣ ಹಿಂತೆಗೆದುಕೊಳ್ಳಲಾಗುವುದು ಎಂದು ಕರೆ ನೀಡಿದೆ.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…