ನವದೆಹಲಿ:ಇನ್ನು ಮುಂದೆ ಕರ್ತವ್ಯ ನಿರತ ವೈದ್ಯರು ಅಥವಾ ಆರೋಗ್ಯ ವೃತ್ತಿಪರರ ಮೇಲೆ ಹಲ್ಲೆ ಅಥವಾ ದಾಳಿ ನಡೆಸಿದರೆ 10 ವರ್ಷ ಜೈಲು ಶಿಕ್ಷೆ ಅಥವಾ 10 ಲಕ್ಷ ರೂ ದಂಡ ಕಟ್ಟಬೇಕಾಗುತ್ತದೆ.
ಕರ್ತವ್ಯ ನಿರತ ವೈದ್ಯರು ಅಥವಾ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಅಥವಾ ದಾಳಿ ನಡೆಸಿದರೆ ಅಂತಹವರಿಗೆ 10 ವರ್ಷ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ.ವರೆಗೂ ದಂಡ ವಿಧಿಸುವ ಕಾಯ್ದೆ ತರಲು ಕಂದ್ರ ಮುಂದಾಗುತ್ತಿದೆ. ವೈದ್ಯರ ಮೇಲಿನ ದಾಳಿ, ಹಲ್ಲೆ ರೀತಿಯ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಸಾರ್ವಜನಿಕ ಅಭಿಪ್ರಾಯಗಳ ಸಂಗ್ರಹಕ್ಕಾಗಿ ಆರೋಗ್ಯ ಸಚಿವಾಲಯ ಆರೋಗ್ಯಪಾಲನೆ ಸೇವೆಗಳ ಸಿಬ್ಬಂದಿ ಮತ್ತು ಕ್ಲಿನಿಕಲ್ ಎಸ್ಟಾಬ್ಲಿಷ್‌ಮೆಂಟ್ಸ್ (ಹಿಂಸೆ ಮತ್ತು ಆಸ್ತಿ ಹಾನಿ ನಿಷೇಧ) ವಿಧೇಯಕ-2019ದ ಕರಡು ಶಾಸನದ ನಿಯಮಗಳನ್ನು ತೆರೆದಿಟ್ಟಿದೆ. ಸಾರ್ವಜನಿಕರು 30 ದಿನಗಳ ಒಳಗೆ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ಭಾರತೀಯ ದಂಡ ಸಂಹಿತೆ(ಐಪಿಸಿ) 320ನೇ ಕಲಂ ಇಟ್ಟುಕೊಂಡು ಈ ಕಾಯ್ದೆಯನ್ನು ರಚಿಸಲು ಸಕಾರ ಮುಂದಾಗಿದೆ. ಕರ್ತವ್ಯ ಸಲ್ಲಿಸುವ ವೇಳೆ ರೋಗಿಗಳ ಕುಟುಂಬ ಅಥವಾ ಅವರ ಕಡೆಯವರು ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದರೆ ಕನಿಷ್ಠ ಮೂರು ವರ್ಷ, ಗರಿಷ್ಠ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಅದರ ಜೊತೆಗೆ ಕನಿಷ್ಠ 2 ಲಕ್ಷದಿಂದ 10 ಲಕ್ಷ ರೂ. ದಂಡ ವಿಧಿಸುವ ಅಂಶ ಈ ಕರಡು ಮಸೂದೆಯಲ್ಲಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…