Featured

ವೈದ್ಯರ ಮೇಲೆ ಹಲ್ಲೆ ನಡೆಸಿದರೆ 10 ವರ್ಷ ಜೈಲು, 10 ಲಕ್ಷ ದಂಡ : ಕೇಂದ್ರ ಸರ್ಕಾರದಿಂದ ಹೊಸ ಕಾನೂನು ಜಾರಿಗೆ -Vishwanews24

ನವದೆಹಲಿ:ಇನ್ನು ಮುಂದೆ ಕರ್ತವ್ಯ ನಿರತ ವೈದ್ಯರು ಅಥವಾ ಆರೋಗ್ಯ ವೃತ್ತಿಪರರ ಮೇಲೆ ಹಲ್ಲೆ ಅಥವಾ ದಾಳಿ ನಡೆಸಿದರೆ 10 ವರ್ಷ ಜೈಲು ಶಿಕ್ಷೆ ಅಥವಾ 10 ಲಕ್ಷ ರೂ ದಂಡ ಕಟ್ಟಬೇಕಾಗುತ್ತದೆ.

ಕರ್ತವ್ಯ ನಿರತ ವೈದ್ಯರು ಅಥವಾ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಅಥವಾ ದಾಳಿ ನಡೆಸಿದರೆ ಅಂತಹವರಿಗೆ 10 ವರ್ಷ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ.ವರೆಗೂ ದಂಡ ವಿಧಿಸುವ ಕಾಯ್ದೆ ತರಲು ಕಂದ್ರ ಮುಂದಾಗುತ್ತಿದೆ. ವೈದ್ಯರ ಮೇಲಿನ ದಾಳಿ, ಹಲ್ಲೆ ರೀತಿಯ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಸಾರ್ವಜನಿಕ ಅಭಿಪ್ರಾಯಗಳ ಸಂಗ್ರಹಕ್ಕಾಗಿ ಆರೋಗ್ಯ ಸಚಿವಾಲಯ ಆರೋಗ್ಯಪಾಲನೆ ಸೇವೆಗಳ ಸಿಬ್ಬಂದಿ ಮತ್ತು ಕ್ಲಿನಿಕಲ್ ಎಸ್ಟಾಬ್ಲಿಷ್‌ಮೆಂಟ್ಸ್ (ಹಿಂಸೆ ಮತ್ತು ಆಸ್ತಿ ಹಾನಿ ನಿಷೇಧ) ವಿಧೇಯಕ-2019ದ ಕರಡು ಶಾಸನದ ನಿಯಮಗಳನ್ನು ತೆರೆದಿಟ್ಟಿದೆ. ಸಾರ್ವಜನಿಕರು 30 ದಿನಗಳ ಒಳಗೆ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.

ಭಾರತೀಯ ದಂಡ ಸಂಹಿತೆ(ಐಪಿಸಿ) 320ನೇ ಕಲಂ ಇಟ್ಟುಕೊಂಡು ಈ ಕಾಯ್ದೆಯನ್ನು ರಚಿಸಲು ಸಕಾರ ಮುಂದಾಗಿದೆ. ಕರ್ತವ್ಯ ಸಲ್ಲಿಸುವ ವೇಳೆ ರೋಗಿಗಳ ಕುಟುಂಬ ಅಥವಾ ಅವರ ಕಡೆಯವರು ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದರೆ ಕನಿಷ್ಠ ಮೂರು ವರ್ಷ, ಗರಿಷ್ಠ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಅದರ ಜೊತೆಗೆ ಕನಿಷ್ಠ 2 ಲಕ್ಷದಿಂದ 10 ಲಕ್ಷ ರೂ. ದಂಡ ವಿಧಿಸುವ ಅಂಶ ಈ ಕರಡು ಮಸೂದೆಯಲ್ಲಿದೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

17 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

17 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago