Featured

ವೈಭವದ ಶೋಭಾಯಾತ್ರೆಯೊಂದಿಗೆ ಉಚ್ಚಿಲ ದಸರಾ ಸಂಪನ್ನ – Vishwanews24

ವೈಭವದ ಶೋಭಾಯಾತ್ರೆಯೊಂದಿಗೆ ಉಚ್ಚಿಲ ದಸರಾ ಸಂಪನ್ನ

ಉಚ್ಚಿಲ: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದಲ್ಲಿ ಅದ್ದೂರಿಯಾಗಿ ಉಚ್ಚಿಲ ದಸರಾ- 2023 ಮೆರವಣಿಗೆ ಮಂಗಳವಾರ ಲಕ್ಷಾಂತರ ಭಕ್ತರ ಸಮ್ಮುಖ ಸಂಪನ್ನಗೊಂಡಿತು.

ವಿಜಯದಶಮಿಯ ಪರ್ವಕಾಲದಲ್ಲಿ ಶ್ರೀ ಶಾರದಾ ಮಾತೆ ಮತ್ತು ನವದುರ್ಗೆಯರ ಭವ್ಯವಾದ ಶೋಭಾಯಾತ್ರೆಗೆ ಕ್ಷೇತ್ರದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್ ನೇತೃತ್ವದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶಪಾಲ್ ಎ. ಸುವರ್ಣ, ಗೋಲ್ಡ್ ಫಿಂಚ್ ಹೋಟೆಲ್ಸ್ ಸಮೂಹದ ಸಿಎಂಡಿ ಪ್ರಕಾಶ್ ಶೆಟ್ಟಿ, ಮಾಜಿ ಶಾಸಕ ರಘುಪತಿ ಭಟ್ ಅವರು ಉಚ್ಚಿಲ ಕ್ಷೇತ್ರದ ಅಧಿದೇವತೆ ಶ್ರೀ ಮಹಾಲಕ್ಷ್ಮೀ ಅಮ್ಮನವರ ಭಾವಚಿತ್ರ ಹೊತ್ತ ಆನೆ ಅಂಬಾರಿಯ ಮೇಲೆ ಪುಷ್ಪವೃಷ್ಟಿಗೈಯುವ ಮೂಲಕ ಶೋಭಾಯಾತ್ರೆಗೆ ಚಾಲನೆ ನೀಡಿದರು.

ಲಕ್ಷಾಂತರ ಭಕ್ತರು ಭಾವುಕರಾಗಿ ಕಾದು ಕುಳಿತು ಮೆರವಣಿಗೆಯಲ್ಲಿ ಸಾಗಿ ಬಂದ ಮೊಗವೀರ ಸಮಾಜದ ಕುಲಗುರು ಮಾಧವಮಂಗಳ ಗುರು, ಶ್ರೀ ಕ್ಷೇತ್ರ ಉಚ್ಚಿಲದ ಸ್ಥಾಪಕರಾದ ಸದಿಯ ಸಾಹುಕಾರರ ಮೂರ್ತಿಯ ಟ್ಯಾಬ್ಲೊಗಳೊಂದಿಗೆ ಪರ್ಸಿನ್ ಬೋಟ್ ಪ್ರತಿಕೃತಿ, ಮೀನುಗಾರಿಕಾ ಪ್ರತಿಬಿಂಬವಾಗಿ ಟ್ಯಾಬ್ಲೋ, ಹುಲಿವೇಷ, ಭಜನಾ ಸಂಕೀರ್ತನೆಗಳ ತಂಡ, ವ್ಯಾಯಾಮ ಶಾಲಾ ತಾಲೀಮು ತಂಡ, ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಆಕರ್ಷಕ ವೇಷಭೂಷಣಗಳು ಮೆರವಣಿಗೆಯ ವೈಭವವನ್ನು ಸಾಕ್ಷೀಕರಿಸಿತು.

ಜಿಲ್ಲಾಡಳಿತದ ನಿರ್ದೇಶನದಂತೆ ಜಿಲ್ಲಾ ಪೊಲೀಸ್ ತಂಡ ಮೆರವಣಿಗೆಯುದ್ದಕ್ಕೂ ಸಾರ್ವಜನಿಕರಿಗೆ ಸಮಸ್ಯೆಯುಂಟಾಗದಂತೆ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಿದ್ದು, ಮೆರವಣಿಗೆ ಸಾಂಗವಾಗಿ ನಡೆಯಲು ಕಾರಣವಾಯಿತು. ಮೆರವಣೆಗೆಯ ಉದ್ದಕ್ಕೂ ರಸ್ತೆ ಪಕ್ಕ ಲಕ್ಷಾಂತರ ಭಕ್ತರು ಭವ್ಯ ಮೆರವಣಿಗೆಯನ್ನು ಸ್ವಾಗತಿಸಿ ಭಾವುಕರಾದರು.

ದ.ಕ. ಮೊಗವೀರ ಮಹಾಜ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಮಹಿಳಾ ವಿಭಾಗದ ಅಧ್ಯಕ್ಷೆ ಉಷಾರಾಣಿ, ಪ್ರಮುಖರಾದ ನಯನಾ ಗಣೇಶ್, ಆನಂದ ಸಿ.ಕುಂದರ್, ಕೇಶವ ಕುಂದರ್ ಮತ್ತಿತರ ಗಣ್ಯರು ಇದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago