ಬೆಂಗಳೂರು: ವೈಯಕ್ತಿಕ ಕಾರಣಕ್ಕೆ ನೇಹಾ ಕೊಲೆಯಾಗಿದ್ದು, ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು.
ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹತ್ಯೆ (ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಮತ್ತು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಒಂದು ಗಂಟೆಗೂ ಹೆಚ್ಚು ಕಾಲ ಸುದೀರ್ಘ ಸಭೆ ನಡೆಸಿದರು.
ಸಭೆಯಲ್ಲಿ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು. ಆರೋಪಿ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಿ. ಚುನಾವಣಾ ಸಮಯದಲ್ಲಿ ಇಂತಹ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದಾರಾಮಯ್ಯ ಅವರು, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಬಹಳ ಚೆನ್ನಾಗಿದೆ. ಯಾವುದೇ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿರುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರ ಕೆಲಸ. ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುತ್ತದೆ ಎಂದು ಹೇಳಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…