Featured

ವೈಯಕ್ತಿಕ ದ್ವೇಷಗಳನ್ನು ಬಿಟ್ಟು ಬಿಜೆಪಿ ಸೋಲಿಸಲು ಕೆಲಸ ಮಾಡಿ : ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರಿಗೆ ಸಿಎಂ ಕರೆ

ಬೆಂಗಳೂರು: ಸಮ್ಮಿಶ್ರ ಸರ್ಕಾರ ರಚನೆಯಾದ ನಂತರ ಉಪ ಚುನಾವಣೆ ಬಂದಿದೆ, ಐದು ಕ್ಷೇತ್ರಗಳ ಉಪ ಚುನಾವಣೆ ಪ್ರತಿಷ್ಠೆಯಾಗಿ ಪರಿಣಮಿಸಿದೆ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ಧಿ ಗೋಷ್ಠಿಯಲ್ಲಿ ಮಾತನಾಡಿದ ಕುಮಾರ ಸ್ವಾಮಿ, ಶಿವಮೊಗ್ಗ ಕ್ಷೇತ್ರಕ್ಕೆ ಜೆಡಿಎಸ್- ಕಾಂಗ್ರೆಸ್ ಒಮ್ಮತದ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಅವರನ್ನು ಕಣಕ್ಕಿಳಿಸಿದ್ದೇವೆ, ಹೀಗಾಗಿ ವಯಕ್ತಿಕ ದ್ವೇಷವನ್ನು ಬದಿಗೊತ್ತಿ ಬಿಜೆಪಿ ವಿರುದ್ಧ ಕೆಲಸ ಮಾಡಬೇಕೆಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಕುಮಾರ ಸ್ವಾಮಿ ಕರೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಯಡಿಯೂರಪ್ಪ ಪುತ್ರನನ್ನು ಸೋಲಿಸುವ ಉದ್ದೇಶದಿಂದ  ಕಾಂಗ್ರೆಸ್ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಾಳೆ ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ.
ಉಪ ಚುನಾವಣೆ ಕುಟುಂಬ ರಾಜಕಾರಣಕ್ಕೆ ವೇದಿಕೆಯಾಗಿದೆ, ಆದರೆ ನಮ್ಮ ಕುಟುಂಬದತ್ತ ಬೆರಳು ಮಾಡಿ ತೋರಿಸಲಾಗುತ್ತದೆ, ಆದರೆ ಈ ಚುನಾವಣೆಯಿಂದ ನಾನು ತಪ್ಪಿಸಿಕೊಂಡಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ವಿಧಾನಸಭೆ ಚುನಾವಣೆ ನಂತರ ಕೆಲ ದಿನಗಳ ಕಾಲ ಬೇಸರವಾಗಿತ್ತು, ಆದರೆ ನನ್ನ ತಂದೆಯೇ ಚುನಾವಣೆಯಲ್ಲಿ ಸೋತಿದ್ದರು, ಅದನ್ನೆಲ್ಲವನ್ನು ನಾವು ನುಂಗಿದ್ದೇವೆ ಎಂದು ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಹೇಳಿದ್ದಾರೆ.
Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago