Featured

ವೈರಲ್ ಆಗಿರುವ ವಿಡಿಯೋಗೂ ಮಂಗಳೂರಿನಲ್ಲಿ ನಡೆದ ಸ್ಟೋಟ ಪ್ರಕರಣಕ್ಕೂ ಸಂಬಂಧವಿಲ್ಲ :- ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಪಷ್ಟನೆ – Vishwanews24

ವೈರಲ್ ಆಗಿರುವ ವಿಡಿಯೋಗೂ ಮಂಗಳೂರಿನಲ್ಲಿ ನಡೆದ  ಸ್ಟೋಟ ಪ್ರಕರಣಕ್ಕೂ ಸಂಬಂಧವಿಲ್ಲ :- ಕಮಿಷನರ್ ಸ್ಪಷ್ಟನೆ

ಮಂಗಳೂರು: ವಿಡಿಯೋ ಒಂದರಲ್ಲಿ ಇಬ್ಬರು ವ್ಯಕ್ತಿಗಳು ಬ್ಯಾಗ್‌ನೊಂದಿಗೆ ಓಡಾಡುತ್ತಿರುವ ದೃಶ್ಯವಿದ್ದು, ಮಂಗಳೂರು ನಗರದಲ್ಲಿ ನಡೆದ ಸ್ಟೋಟ ಪ್ರಕರಣದಲ್ಲಿ ಭಾಗಿಯಾಗಿರುತ್ತಾರೆ ಎಂಬುದಾಗಿ ಸುದ್ದಿ ಹರಿದಾಡುತ್ತಿದ್ದು, ಈ ವಿಡಿಯೋಗೂ ಮಂಗಳೂರಿನಲ್ಲಿ ನಡೆದ ಸ್ಟೋಟ ಪ್ರಕರಣಕ್ಕೂ ಸಂಬಂಧವಿರುವುದಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ‌ಇಬ್ಬರು ವ್ಯಕ್ತಿಗಳು ಓಡಾಡುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅದನ್ನು ಸ್ಪೋಟ ಪ್ರಕರಣದ ಆರೋಪಿ ಮತ್ತು ಆತನೊಂದಿಗೆ ಇನ್ನೊಬ್ಬ ವ್ಯಕ್ತಿ ಇದ್ದ ಎಂಬಂತೆ ಬಿಂಬಿಸಲಾಗುತ್ತಿದೆ. ಆದರೆ ಅಸಲಿಗೆ ಆ ವೀಡಿಯೋಗೂ, ಘಟನೆಗೂ ಯಾವುದೇ ಸಂಬಂಧವಿಲ್ಲ. ಅದು ರೈಲು ನಿಲ್ದಾಣದ ಬಳಿಯ ಸ್ಥಳವಾದ್ದರಿಂದ ಯಾರೋ ಪ್ರಯಾಣಿಕರು ಓಡಾಡುತ್ತಿರುವುದನ್ನು ಘಟನೆಯೊಂದಿಗೆ ತಳುಕು ಹಾಕಲಾಗುತ್ತಿದೆ. ಇದು ಸೂಕ್ಷ್ಮ ವಿಚಾರವಾಗಿರುವುದರಿಂದ ಸಾರ್ವಜನಿಕರು ಪರಿಶೀಲಿಸದ ಇಂತಹ ವೀಡಿಯೋಗಳನ್ನು ನಂಬಬಾರದು ಎಂದವರು ಮನವಿ ಮಾಡಿದ್ದಾರೆ.

📛 ಬೆಂಗಳೂರು: ಬಿಎಂಟಿಸಿ ಬಸ್​ ಹರಿದು 15 ವರ್ಷದ ಬಾಲಕಿ ಸಾವು..⏺️ ಅಮ್ಮ-ಮಗನ ಸ್ಥಿತಿ ಗಂಭೀರ – Vishwanews24

ಈ ಘಟನೆ ಬಳಿಕ ಮಂಗಳೂರು ನಗರ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ನಿಗಾ ಇಡಲಾಗುತ್ತಿದೆ. ಧಾರ್ಮಿಕ ಕೇಂದ್ರ, ಮಾಲ್‌ಗಳು, ಜನನಿಬಿಡ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗುವುದು. ಶ್ವಾನ ದಳದಿಂದಲೂ ಪರಿಶೀಲನೆ ನಡೆಯಲಿದೆ ಎಂದವರು ತಿಳಿಸಿದರು.

ಘಟನೆಯಲ್ಲಿ ಗಾಯಗೊಂಡ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಆರೋಪಿಗೆ ಗಂಭೀರ ಗಾಯಗಳಾಗಿರುವುದರಿಂದ ಚಿಕಿತ್ಸೆ ನಡೆಯುತ್ತಿದೆ. ಸದ್ಯ ಆತ ಮಾತನಾಡುವ ಪರಿಸ್ಥಿತಿಯಲ್ಲಿಲ್ಲದ ಕಾರಣ ಏನೂ ಮಾಹಿತಿಗಳನ್ನು ಪಡೆದುಕೊಳ್ಳಲಾಗುತ್ತಿಲ್ಲ. ಆತ ಚೇತರಿಸಿಕೊಂಡಿರುವ ಬಗ್ಗೆ ವೈದ್ಯರಿಂದ ಅಧಿಕೃತಗೊಂಡ ಬಳಿಕ ಆತನ ವಿಚಾರಣೆ ನಡೆಯಲಿದೆ ಎಂದರು.

📛 ಬಾಂಬ್ ಬ್ಲಾಸ್ಟ್ ಪ್ರಕರಣ : ನಾಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳೂರಿಗೆ – Vishwanews24

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago