Featured

ವೈರಲ್‌ ಫೋಸ್ಟ್‌ ಯಡವಟ್ಟು : ರೀಲ್ಸ್ ಮಾಡಲು ಹೋಗಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದ ಹುಡುಗಿಯನ್ನು ಉಪ್ಪು ಸುರಿದು ಬದುಕಿಸಲು ಯತ್ನ – Vishwanews24

ವೈರಲ್‌ ಫೋಸ್ಟ್‌ ಯಡವಟ್ಟು: ರೀಲ್ಸ್ ಮಾಡಲು ಹೋಗಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದ ಹುಡುಗಿಯನ್ನು ಉಪ್ಪು ಸುರಿದು ಬದುಕಿಸಲು ಯತ್ನ

ಚಿಕ್ಕಬಳ್ಳಾಪುರ: ಕೆರೆಯ ಬಳಿ ರೀಲ್ಸ್ ಮಾಡಲು ಹೋದ ಯುವತಿ ಕೆರೆಗೆ ಉರುಳಿ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ  ಜಿಲ್ಲೆಯ ಗಂಗಾನಹಳ್ಳಿ ಗ್ರಾಮದ ಬಳಿ ನಡೆದಿದೆ.

ಮೂಲತಃ ಶಿಡ್ಲಘಟ್ಟ ತಾಲೂಕಿನ ಗಾಜಿಲುವಾರುಪಲ್ಲಿ ಗ್ರಾಮದ ಎಂಎ ಪದವೀದರೆ ಅಮೃತ(22) ಮೃತ ಯುವತಿ. ಅಂದಹಾಗೆ ಜಂಬಿಗೆ ಮರದಹಳ್ಳಿಯ ನೆಂಟರ ಮನೆಯ ಗೃಹಪ್ರವೇಶದ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಯುವತಿ ಅಮೃತ ಗಂಗಾನಹಳ್ಳಿ ಕೆರೆ ಕೋಡಿ ಹರಿಯುತ್ತಿರುವ ವಿಚಾರ ತಿಳಿದು ಮತ್ತೋರ್ವ ಯುವತಿಯ ಜೊತೆ ಕೆರೆ ಬಳಿ ತೆರಳಿದ್ದಳು.

ಈ ವೇಳೆ ಜೊತೆಯಲ್ಲಿದ್ದ ಯುವತಿಗೆ ವೀಡಿಯೋ ಮಾಡಲು ಹೇಳಿ ಮೊಬೈಲ್ ನೀಡಿ ಕೆರೆಯ ಅಂಚಿನ ದಿಂಡಿನ ಮೇಲೆ ತೆರಳಿದ್ದಳು. ಆದರೆ ಈ ವೇಳೆ ಆಕಸ್ಮಿಕ ಕಾಲು ಜಾರಿ ಕೆರೆಗೆ ಅಮೃತಾ ಉರುಳಿಬಿದ್ದು ಸಾವನ್ನಪ್ಪಿದ್ದಾಳೆ. ಗುಡಿಬಂಡೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮೃತದೇಹವನ್ನು ಗುಡಿಬಂಡೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

ಇನ್ನೂ ಕೆರೆಯ ನೀರಲ್ಲಿ ಅಮೃತ ಉರುಳಿದ ಘಟನೆಯನ್ನು ಅಕ್ಷತಾ ತೋಟದಲ್ಲಿದ್ದ ಗ್ರಾಮಸ್ಥರಿಗೆ ತಿಳಿಸಿದ್ದು ಅರ್ಧ ಗಂಟೆಯಲ್ಲೇ ಕೆರೆಯಿಂದ ಮೃತ ಅಕ್ಷತಾಳನ್ನು ಸ್ಥಳೀಯರೇ ಮೇಲೆ ಎತ್ತಿದ್ದಾರೆ. ಇನ್ನೂ ಇತ್ತೀಚೆಗೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದವರ ಮೃತದೇಹದ ಮೇಲೆ ಅರ್ಧ ಗಂಟೆಯೊಳಗೆ ಉಪ್ಪು  ಹಾಕಿ ಮಲಗಿಸಿದರೆ ಬದುಕುತ್ತಾರೆ ಎಂಬ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಸುಳ್ಳು ಸಂದೇಶದಂತೆ ಯುವತಿಯನ್ನು ಬದುಕಿಸಬೇಕು ಅಂತ ಆಕೆಯ ಮೇಲೆ ಉಪ್ಪು ಸುರಿದು ಬದುಕಿಸಲು ಗ್ರಾಮಸ್ಥರು ಪ್ರಯತ್ನಿಸಿದ್ದಾರೆ.

ಘಟನ ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಆಗಮಿಸಿ ಅಮೃತಳ ಶವವನ್ನು ಗುಡಿಬಂಡೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

2nd ಪಿಯುಸಿ ಪೂರಕ ಪರೀಕ್ಷೆ’ ಫಲಿತಾಂಶ ಪ್ರಕಟ.. ರಿಸಲ್ಟ್‌ ನೋಡಲು ಹೀಗೆ ಮಾಡಿ – Vishwanews24

Vishwa News 24

Recent Posts

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

2 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

4 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

5 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

6 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

6 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

6 hours ago