ವೈವಾಹಿಕ ಜೀವನಕ್ಕೆ ಕಾಲಿಟ್ಟ ಕನ್ನಡದ ಖ್ಯಾತ ನಿರೂಪಕಿ ನಟಿ ಅನುಶ್ರೀ – vishwanews24

Featured, ರಾಜ್ಯ ನ್ಯೂಸ್

ವೈವಾಹಿಕ ಜೀವನಕ್ಕೆ ಕಾಲಿಟ್ಟ ಕನ್ನಡದ ಖ್ಯಾತ ನಿರೂಪಕಿ ನಟಿ ಅನುಶ್ರೀ

ವೈವಾಹಿಕ ಜೀವನಕ್ಕೆ ಕಾಲಿಟ್ಟ ಕನ್ನಡದ ಖ್ಯಾತ ನಿರೂಪಕಿ ನಟಿ ಅನುಶ್ರೀಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ ಅನುಶ್ರೀ ಇಂದು (ಆ.28) ಕೊಡಗು ಮೂಲದ ರೋಷನ್ ಹೊಸ ಮನ್ವಂತರಕ್ಕೆ ಕಾಲಿಟ್ಟಿದ್ದಾರೆ.

ತಮ್ಮ ನಿರೂಪಣೆಯಿಂದ ಹೆಚ್ಚು ಜನಪ್ರಿಯತೆ ಗಳಿಸಿದ ಅನುಶ್ರೀ ತಮ್ಮ ಬಹುಕಾಲದ ಗೆಳೆಯ ರೋಷನ್ ಜೊತೆ ಹಸೆಮಣೆ ಏರಿದ್ದು, 10:56ರ ಶುಭ ಮೂಹೂರ್ತದಲ್ಲಿ ಅನುಶ್ರಿ ಹಾಗೂ ರೋಷನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಬೆಂಗಳೂರಿನ ಕಗ್ಗಲಿಪುರ  ಬಳಿಯ ಹೊರವಲಯದ ರೆಸಾರ್ಟ್‌ನಲ್ಲಿ ಮದುವೆ ನೆರವೇರಿದ್ದು, ಕಿರುತೆರೆ ಕಲಾವಿದರು, ಚಿತ್ರೋದ್ಯಮದ ಗಣ್ಯರು ನವಜೋಡಿಗೆ ಶುಭ ಹಾರೈಸಿದ್ದಾರೆ. ಇನ್ನೂ ವೆಡ್ಡಿಂಗ್ ಕಾರ್ಡ್ ಕೂಡ ಸೋಶಿಯಲ್ ಮೀಡಿಯಾದಲ್ಲಿ  ವೈರಲ್ ಆಗಿಬಿಟ್ಟಿದೆ.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಮಹಮ್ಮದ್ ಇಕ್ಬಾಲ್ ಪಂಚಾಯತ್ ಸದಸ್ಯತ್ವ ರದ್ದು – vishwanews24

ಮದುವೆಗೂ ಹಿಂದಿನ ದಿನ ಬುಧವಾರ (ಆ.27) ನಡೆದ ಹಳದಿ ಶಾಸ್ತ್ರದ ಫೋಟೋಗಳು ವೈರಲ್ ಆಗಿವೆ. ಹಳದಿ ಶಾಸ್ತ್ರದಲ್ಲಿ ಭಾವಿ ದಂಪತಿಗಳು ಹಳದಿ ಉಡುಗೆಯಲ್ಲೇ ಕಾಣಿಸಿಕೊಂಡಿದ್ದಾರೆ. ಸುತ್ತಲೂ ಸೂರ್ಯಕಾಂತಿ ಹೂವಿನ ಅಲಂಕಾರ ಈ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದೆ. ಹಳದಿ ಶಾಸ್ತ್ರದಲ್ಲಿ ಮಿಂಚಿದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

ಅನುಶ್ರೀ ಅವರ ವಿವಾಹ ಬೆಂಗಳೂರಿನ ಹೊರ ವಲಯದಲ್ಲಿ ಇರುವ ಕಗ್ಗಲಿಪುರದ ರೆಸಾರ್ಟ್ ಒಂದರಲ್ಲಿ ನಡೆಯುತ್ತಿದೆ. ಈ ವಿಚಾರ ತಿಳಿದ ಫ್ಯಾನ್ಸ್ ದೊಡ್ಡ ಸಂಖ್ಯೆಯಲ್ಲಿ ತೆರಳುತ್ತಿದ್ದಾರೆ. ಆದರೆ, ಅಭಿಮಾನಿಗಳಿಗೆ ಒಳಗೆ ಎಂಟ್ರಿ ನೀಡಲಾಗುತ್ತಿಲ್ಲ.

 

Leave a Reply