Featured

ವೋಟರ್​ ಐಡಿ ಇಲ್ಲದಿದ್ದರೂ ಈ ದಾಖಲೆಗಳ ಮೂಲಕ ಮತದಾನ ಮಾಡಬಹುದು – Vishwanews24

ಬೆಂಗಳೂರು: ಮತದಾರರ ಪಟ್ಟಿಯನ್ನು ಕರಾರುವಕ್ಕಾಗಿ ಹಾಗೂ ಗುಣಮಟ್ಟವನ್ನು ಹೆಚ್ಚಿಸಲು ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ತಿಳಿಸಿದ್ದಾರೆ.

ಅವರು ಇಂದು ನಡೆದ ಮಾಧ್ಯಮಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು, ಇನ್ನು ಫೆ. 28 ರಂದು ಚುನವಣಾ ಆಯೋಗ ತನ್ನ ನಿರ್ದೇಶನದಲ್ಲಿ 11 ಭಾವಚಿತ್ರವಿರುವ ಗುರುತಿನ ಚೀಟಿಗಳನ್ನು ಪರ್ಯಾಯವಾಗಿ ಬಳಸಲು ಅನುಮತಿ ನೀಡಿದೆ. ಯಾವುದೇ ವ್ಯಕ್ತಿ/ಮಹಿಳೆ ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ, ಮತದಾರರ ಪಟ್ಟಿಯಲ್ಲಿ ಅವರ ಹೆಸರಿದ್ದು ಮತ್ತು ಅವರು ಮತದಾರರ ಗುರುತಿನ ಚೀಟಿಯನ್ನು ಪ್ರಸ್ತುತ ಪಡಿಸಲು ವಿಫಲರಾದರೆ ಈ ಕೆಳಕಂಡ ಭಾವಚಿತ್ರವಿರುವ ಗುರುತಿನ ಚೀಟಿಗಳನ್ನು ಪ್ರಸ್ತುತಪಡಿಸುವ ಮೂಲಕ ಮತದಾನ ಮಾಡಬಹುದಾಗಿದೆ ಅಂತ ತಿಳಿಸಿದ್ದಾರೆ.

1.ಪಾಸ್ ಪೋರ್ಟ್
2.ಡ್ರೈವಿಂಗ್ ಲೈಸನ್ಸ್
3.ಕೇಂದ್ರ/ರಾಜ್ಯ/ಪಿಎಸ್​ಯು/ಪಬ್ಲಿಕ್ ಲಿಮಿಟೆಡ್ ಕಂಪನಿಗಳ ಭಾವಚಿತ್ರ ಹೊಂದಿರುವ ಸೇವಾ ಗುರುತಿನ ಚೀಟಿ
4.ಪೋಸ್ಟ್ ಆಫೀಸ್ ಮತ್ತು ಬ್ಯಾಂಕುಗಳಲ್ಲಿ ನೀಡಿರುವ ಪಾಸ್ ಬುಕ್​ಗಳು
5.ಪ್ಯಾನ್ ಕಾರ್ಡ್
6.ಆಧಾರ್ ಕಾರ್ಡ್​
7.ಉದ್ಯೋಗ ಖಾತ್ರಿ ಗುರುತಿನ ಚೀಟಿ
8.ಕಾರ್ಮಿಕ ಇಲಾಖೆಯಿಂದ ನೀಡಲಾಗಿರುವ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್
9. ಭಾವಚಿತ್ರ ಹೊಂದಿರುವ ಪೆನ್ಶನ್ ಕಾರ್ಡ್​ಗಳು
10.ಲೋಕಸಭಾ ಸದಸ್ಯರುಗಳು/ರಾಜ್ಯಸಭಾ ಸದಸ್ಯರುಗಳು/ಶಾಸಕರು/ವಿಧಾನಸಭಾ ಸದಸ್ಯರುಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿ
11.ಆರ್​ಜಿಐ ಮತ್ತು ಎನ್​ಪಿಆರ್ ಮೂಲಕ ನೀಡಿರುವ ಸ್ಮಾಟ್ ಕಾರ್ಡ್

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago