ವ್ಯಾಪಕ ಮಳೆ ಹಿನ್ನಲೆ : ಕೊಡಗಿನಲ್ಲಿ ಇಂದಿನಿಂದ ಭಾರೀ ವಾಹನ ಸಂಚಾರಕ್ಕೆ ನಿರ್ಬಂಧ :  ಜಿಲ್ಲಾಧಿಕಾರಿಗಳಿಂದ ಆದೇಶ – Vishwanews24

Featured, ರಾಜ್ಯ ನ್ಯೂಸ್

ವ್ಯಾಪಕ ಮಳೆ ಹಿನ್ನಲೆ : ಕೊಡಗಿನಲ್ಲಿ ಇಂದಿನಿಂದ ಭಾರೀ ವಾಹನ ಸಂಚಾರಕ್ಕೆ ನಿರ್ಬಂಧ :  ಜಿಲ್ಲಾಧಿಕಾರಿಗಳಿಂದ ಆದೇಶ

 ಕೊಡಗು: ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಹಿನ್ನಲೆಯಲ್ಲಿ ಸ್ಥಳೀಯ ಜನರಲ್ಲಿ ಭಯ ಶುರುವಾಗಿದೆ.

ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದ್ದು, ಮೊದಲ ಹೆಜ್ಜೆಯಾಗಿ ಕೊಡಗು ಜಿಲ್ಲೆಯಲ್ಲಿ ಭಾರೀ ವಾಹನಗಳ ನಿಷೇಧಕ್ಕೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.ವ್ಯಾಪಕ ಮಳೆಯಾಗುತ್ತಿರುವುದರಿಂದ ಭೂ ಕುಸಿತ, ಗುಡ್ಡ ಕುಸಿತದ ಅಪಾಯವಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ರೀತಿಯ ಮರದ ದಿಮ್ಮಿ, ಮರಳು ಸಾಗಿಸುವ ವಾಹನಗಳನ್ನು ಇಂದಿನಿಂದ ಅಕ್ಟೋಬರ್​ 15ರವರೆಗೆ ಸಂಪೂರ್ಣವಾಗಿ ಸಂಚಾರ ನಿಷೇಧಿಸಲಾಗಿದೆ.

16,200 ಕೆಜಿಗಿಂತ ಹೆಚ್ಚಿನ ತೂಕದ ಸರಕು ಸಾಗಣೆ ವಾಹನಗಳಿಗೆ ಪ್ರವೇಶವಿಲ್ಲ, ಬುಲೆಟ್ ಟ್ಯಾಂಕರ್, ಶಿಪ್ ಕಾರ್ಗೋ ಕಂಟೈನರ್, ಲಾಂಗ್ ಚಾಸೀಸ್(ಮಲ್ಟಿ ಆಯಕ್ಸೆಲ್) ವಾಹನಗಳಿಗೂ ನಿರ್ಬಂಧಿಸಲಾಗಿದೆ. ಆದರೆ ಅಡುಗೆ ಅನಿಲ, ಇಂಧನ ಪೂರೈಕೆ, ಹಾಲು ಪೂರೈಕೆ, ಸರ್ಕಾರಿ ವಾಹನಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಸಿ. ಸತೀಶ್​ ಅವರು ಆದೇಶ ಹೊರಡಿಸಿದ್ದಾರೆ.

ವಿದ್ಯುತ್ ಶಾಕ್ : ಚಿಕಿತ್ಸೆ ಫಲಕಾರಿಯಾಗದೆ ರಾಷ್ಟ್ರೀಯ ಫುಟ್‍ಬಾಲ್ ಆಟಗಾರ ವಿಶ್ವಾಸ್  ನಿಧನ – Vishwanews24

Leave a Reply