ನವದೆಹಲಿ: ವ್ಯಾಪಾರಿ ಸಮುದಾಯದ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಚಿಲ್ಲರೆ ಹಾಗೂ ಸಗಟು ವ್ಯಾಪಾರ ವಲಯವನ್ನು ಕೂಡ ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಪ್ರಮಾಣದ (ಎಂಎಸ್‌ಎಂಇ) ಉದ್ಯಮದ ವ್ಯಾಪ್ತಿಗೆ ತರಲಾಗಿದೆ. ಇದು ವ್ಯಾಪಾರಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರವಾಗಿದೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ.
ಚಿಲ್ಲರೆ ಹಾಗೂ ಸಗಟು ವ್ಯಾಪಾರ ವಲಯವನ್ನು ಎಂಎಸ್‌ಎಂಇ ಉದ್ಯಮದ ವ್ಯಾಪ್ತಿಗೆ ತರಲಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಘೋಷಿಸಿದ್ದರು. ಇದರಿಂದಾಗಿ ಚಿಲ್ಲರೆ ಹಾಗೂ ಸಗಟು ವ್ಯಾಪಾರ ವಲಯದವರಿಗೆ ಕೂಡ ಆರ್‌ಬಿಐ ಮಾರ್ಗಸೂಚಿ ಅನ್ವಯ ಆದ್ಯತೆಯ ಮೇರೆಗೆ ಸಾಲ ಲಭ್ಯವಾಗಲಿದೆ.
ಈ ಕುರಿತು ಟ್ವೀಟ್ ಮಾಡಿರುವ ಮೋದಿ, ‘ನಮ್ಮ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇದರಿಂದ ಕೋಟ್ಯಂತರ ವ್ಯಾಪಾರಿಗಳಿಗೆ ಹಣಕಾಸು ಸೌಲಭ್ಯ ಪಡೆಯುವುದು ಸುಲಭವಾಗಲಿದೆ. ಅನೇಕ ಪ್ರಯೋಜನಗಳನ್ನು ಪಡೆಯುವ ಮೂಲಕ ವ್ಯವಹಾರ ಹೆಚ್ಚಿಸಲು ನೆರವಾಗಲಿದೆ. ವ್ಯಾಪಾರಸ್ಥರ ಸಬಲೀಕರಣಕ್ಕೆ ನಾವು ಬದ್ಧರಾಗಿದ್ದೇವೆ’ ಎಂದು ಉಲ್ಲೇಖಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…