Featured

ಶಂಕರನಾರಾಯಣ : ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಂದ ಆಜಾನ್‌ಗೆ ನೃತ್ಯ – ಹಿಂದೂ ಸಂಘಟನೆಗಳಿಂದ ಆಕ್ಷೇಪ ; ಆಡಳಿತ ಮಂಡಳಿಯಿಂದ ಕ್ಷಮೆ

ಕುಂದಾಪುರ : ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಶಾಲೆ..

ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಂದ ಆಜಾನ್‌ಗೆ ನೃತ್ಯ..

ಹಿಂದೂ ಸಂಘಟನೆಗಳಿಂದ ಆಕ್ಷೇಪ..

ಹಿಂದೂಗಳ ಭಾವನೆಗೆ ಧಕ್ಕೆ ಉಂಟಾಗಿದ್ದರೆ ಕ್ಷಮೆಯಾಚಿಸುತ್ತೇವೆ  – ಆಡಳಿತ ಮಂಡಳಿ

ಉಡುಪಿ : ಕುಂದಾಪುರ ತಾಲೂಕಿನ ಖಾಸಗಿ ಶಾಲೆಯ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಆಜಾನ್‌ಗೆ ನೃತ್ಯ ಮಾಡಿದ್ದಕ್ಕೆ ಹಿಂದೂಗಳಿಂದ ಆಕ್ಷೇಪ ವ್ಯಕ್ತವಾಗಿದ ಬೆನ್ನಲ್ಲೇ ಆಡಳಿತ ಮಂಡಳಿ ಕ್ಷಮೆ ಕೋರಿದೆ.

ಶಂಕರನಾರಾಯಣದ ಮದರ್ ಥೆರೆಸಾ ಮೆಮೋರಿಯಲ್ ಶಾಲೆ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಕ್ರೀಡಾಕೂಟ ಆಯೋಜಿಸಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮಾಡಿದ ಸ್ವಾಗತ ನೃತ್ಯ ಚರ್ಚೆಗೆ ಕಾರಣವಾಯ್ತು.

ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು 6 ವರ್ಷ ಕಡ್ಡಾಯ : ಸರ್ಕಾರದಿಂದ ಅಧಿಕೃತ ಆದೇಶ – Vishwanews24

ಸ್ವಾಗತ ನೃತ್ಯದಲ್ಲಿ ಹಿಂದೂ, ಕ್ರೈಸ್ತ, ಇಸ್ಲಾಂ ಹಾಡುಗಳಿಗೆ ವಿದ್ಯಾರ್ಥಿನಿಯರಿಂದ ನೃತ್ಯ ನಡೆದಿದೆ. ಅಲ್ಲಾಹು ಅಕ್ಬರ್‌ಗೆ (ಆಜಾನ್) ವಿದ್ಯಾರ್ಥಿಗಳು ನೃತ್ಯ ಮಾಡಿದ್ದಕ್ಕೆ ಸ್ಥಳದಲ್ಲೇ ಆಕ್ಷೇಪ ವ್ಯಕ್ತವಾಯ್ತು. ವೇದಿಕೆಯಲ್ಲಿದ್ದ ಸ್ಥಳೀಯ ಬಿಜೆಪಿ ಮುಖಂಡ ಉಮೇಶ್ ಶೆಟ್ಟಿ ಕಲ್ಗದ್ದೆ ಖಂಡನೆ ಮಾಡಿದರು.

ಸ್ಥಳೀಯ ಹಿಂದೂ ಪರ ಸಂಘಟನೆಗಳ ಖಂಡಿಸಿದ್ದು, ಶಾಲಾ ಆಡಳಿತ ಮಂಡಳಿ ಕ್ಷಮೆ ಕೇಳಬೇಕೆಂದು ಪಟ್ಟು ಹಿಡಿದರು. ಕ್ಷಮೆ ಯಾಚಿಸದಿದ್ದರೆ ಪ್ರತಿಭಟಿಸುವ ಎಚ್ಚರಿಕೆ ನೀಡಿದರು. ಕೆಲಕಾಲ ಚರ್ಚೆ ನಡೆದು, ಶಾಲಾ ಆಡಳಿತ ಮಂಡಳಿ ವಿಷಾದ ವ್ಯಕ್ತಪಡಿಸಿದೆ.

ಸ್ವಾಗತ ನೃತ್ಯದಲ್ಲಿ 30 ಸೆಕೆಂಡ್ ಆಜಾನ್‌ಗೆ ವಿದ್ಯಾರ್ಥಿಗಳು ನೃತ್ಯ ಮಾಡಿದ್ದರು, ಆಮೇಲೆ ಕ್ರೈಸ್ತ ಧರ್ಮದ ಬೈಬಲ್‌ ಮತ್ತು ಶ್ಲೋಕಕ್ಕೆ ಹೆಜ್ಜೆ ಹಾಕಿದ್ದರು. ಹಿಂದೂ ಧಾರ್ಮಿಕ ಪದ್ಯಕ್ಕೂ ವಿದ್ಯಾರ್ಥಿಗಳು ಕುಣಿದಿದ್ದರು. ಆಜಾನ್ ಹೆಜ್ಜೆ ಹಾಕಿದ್ದರು. ಯಾರದ್ದೂ ಭಾವನೆಯನ್ನು ಘಾಸಿಗೊಳಿಸಲಾಗಿದೆ ಉದ್ದೇಶ ನಮ್ಮದಾಗಿರಲಿಲ್ಲ. ಹಿಂದೂಗಳ ಭಾವನೆಗೆ ಧಕ್ಕೆ ಉಂಟಾಗಿದ್ದರೆ ಕ್ಷಮೆಯಾಚಿಸುತ್ತೇವೆ ಎಂದು ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರು ವಿಷಾದ ವ್ಯಕ್ತಪಡಿಸಿದರು.

ಮಂಗಳೂರು : ಕರಾವಳಿ ದೈವಸ್ಥಾನಗಳಿಗೆ ಕಾಂತಾರ ನಟಿ ಸಪ್ತಮಿ ಗೌಡ..🏵️ ಕೊರಗಜ್ಜನ ಆದಿಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಟಿ – Vishwanews24

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

1 day ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

1 day ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

1 day ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

1 day ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

1 day ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

1 day ago