ಶಂಕರಪುರ ಸಾಯಿಬಾಬಾ ಮಂದಿರ ವತಿಯಿಂದ ಕರೋನ ಜಾಗೃತಿಗಾಗಿ ಪ್ರಚಾರ ವಾಹನ ಉದ್ಘಾಟನೆ.
ಕಾಪು: ಶಂಕರಪುರ ಸಾಯಿ ಸಾಂತ್ವನ ಮಂದಿರದ ಧರ್ಮಧರ್ಶಿ ಗುರೂಜಿ ಸಾಯಿಈಶ್ವರ್ ಇವರ ಮುತುವರ್ಜಿಯಿಂದ ದ್ವಾರಕಾಮಾಹಿ ಸಾಯಿ ಬಾಬಾ ಮಂದಿರದಿಂದ ಕೋವಿಡ್ 19 ಬಗ್ಗೆ ಜನಜಾಗೃತಿಗಾಗಿ ವಾಹನ ಪ್ರಚಾರವನ್ನು ಗುರುವಾರ ಕಾಪು ಶಾಸಕರಾದ ಲಾಲಾಜಿ ಮೆಂಡನ್ ಚಾಲನೆಗೊಳಿಸಿದರು.
ತದನಂತರ ಕಾರ್ಯಕ್ರಮ ಉದ್ದೇಶಿಸಿ ಮಾತಾಡಿ” ಜಿಲ್ಲೆಯಲ್ಲಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿರು ಗುರೂಜಿ ಸಾಯಿ ಈಶ್ವರ್ ಅವರ ಕಾರ್ಯ ಅತ್ಯಂತ ಶ್ಲಾಘನೀಯವಾಗಿದ್ದು ಕೊರೋನಾದಂತಹ ಈ ಸಂಧರ್ಭದಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರಚಾರ ವಾಹನ ಚಾಲನೆ ಮಾಡಿರುವುದು ಅತ್ಯಂತ ಅಭಿನಂದನೀಯ ಎಂದರು.
ಕೊರೋನಾದಂತಹ ಲಾಕ್-ಡೌನ್ ಸಮಯದಲ್ಲಿ ಮಂದಿರದ ವತಿಯಿಂದ ಊಟೋಪಚಾರ ಹಾಗೂ ಕಿಟ್ ವಿತರಿಸುವ ಕಾರ್ಯ ಮಾಡಿದ್ದರು ಎಂದರು.
ಇದು ದ್ವಾರಕಾಮಾಹಿ ಶ್ರೀ ಸಾಯಿ ಬಾಬಾ ಮಂದಿರದ ವತಿಯಿಂದ ನಡೆಯುವ ರಾಜ್ಯದ ಪ್ರಥಮ ಕೋವಿಡ್ ೧೯ ಜಾಗೃತಿ ಪ್ರಚಾರ ವಾಹನವಾಗಿದೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿ.ಪಂ ಸದಸ್ಯರಾದ ಗೀತಾಂಜಲಿ ಸುವರ್ಣ, ಗ್ರಾಮ.ಪಂ. ಸದಸ್ಯರಾದ ಅಶೋಕ್ ರಾವ್,ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚ ಅಧ್ಯಕ್ಷೆ ವೀಣಾ ಶೆಟ್ಟಿ, ಸಾಯಿ ಮಂದಿರದ ಟ್ರಸ್ಟಿ ವಿಶ್ವನಾಥ ಸುವರ್ಣ ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…