Featured

ಶಕ್ತಿ ಯೋಜನೆ : ಉಡುಪಿ ಜಿಲ್ಲೆಯಲ್ಲಿ 9.71 ಲಕ್ಷ ಮಹಿಳಾ ಪ್ರಯಾಣಿಕರ ಸಂಚಾರ – 3.62 ಕೋಟಿ ಆದಾಯ – Vishwanews24

ಶಕ್ತಿ ಯೋಜನೆ : ಉಡುಪಿ ಜಿಲ್ಲೆಯಲ್ಲಿ 9.71 ಲಕ್ಷ ಮಹಿಳಾ ಪ್ರಯಾಣಿಕರ ಸಂಚಾರ – 3.62 ಕೋಟಿ ಆದಾಯ

ಉಡುಪಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ,ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯ ಮೂಲಕ ಉಡುಪಿ ಜಿಲ್ಲೆಯ ಸರಕಾರಿ ಬಸ್ ಗಳಲ್ಲಿ 9.71 ಲಕ್ಷ ಮಹಿಳಾ ಪ್ರಯಾಣಿಕರು ಸಂಚರಿಸಿದ್ದು, ಸಾರಿಗೆ ಸಂಸ್ಥೆಗೆ ಜುಲೈ 14 ರ ವರೆಗೆ ಇದುವರೆಗೆ 3.62 ಕೋಟಿ ರೂ ಆದಾಯ ಬಂದಿದೆ.

ಉಡುಪಿ ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಡುಪಿ ಮತ್ತು ಕುಂದಾಪುರ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ನಗರ ಸಾರಿಗೆ, ವೇಗದೂತ ಮತ್ತು ಸಾಮಾನ್ಯ ಸಾರಿಗೆ ವಗÀð ಈ ಎಲ್ಲಾ ವರ್ಗದಲ್ಲಿಯೂ ಮಹಿಳಾ ಪ್ರಯಾಣಿಕರ ಸಂಚಾರದಲ್ಲಿ ಗಣನೀಯ ಏರಿಕೆಯಾಗಿದ್ದು, ಶಕ್ತಿ ಯೋಜನೆ ಜಾರಿಯಾದ ಬಳಿಕ ಸುಮಾರು 25 ರಿಂದ 30 % ರಷ್ಟು ಪ್ರಯಾಣಿಕರ ಸಂಖ್ಯೆ ಅಧಿಕಗೊಂಡಿದೆ. ಜೂನ್ 11 ರಂದು ಶಕ್ತಿ ಯೋಜನೆ ಜಾರಿಯಾಗಿದ್ದು, ಅಂದಿನಿಂದ ಜೂನ್30 ರ ವರೆಗೆ ಉಡುಪಿ ಘಟಕದಲ್ಲಿ , ನಗರ ಸಾರಿಗೆ ಬಸ್ ಗಳಲ್ಲಿ 100838 ಮಹಿಳಾ ಪ್ರಯಾಣಿಕರು ಸಂಚರಿಸಿ 1470793 ರೂ, ವೇಗದೂತ ಬಸ್ ಗಳಲ್ಲಿ 94998 ಮಹಿಳಾ ಪ್ರಯಾಣಿಕರು ಸಂಚರಿಸಿ 7409003 ರೂ, ಸಾಮಾನ್ಯ ಬಸ್ ಗಳಲ್ಲಿ 40232 ಮಹಿಳಾ ಪ್ರಯಾಣಿಕರು ಸಂಚರಿಸಿ 794933 ರೂ, ಆದಾಯ ಬಂದಿದ್ದರೆ, ಕುಂದಪುರ ಘಟಕದಲ್ಲಿ ವೇಗದೂತ ಬಸ್ ಗಳಲ್ಲಿ 71410 ಮಹಿಳಾ ಪ್ರಯಾಣಿಕರು ಸಂಚರಿಸಿ 6325419 ರೂ, ಸಾಮಾನ್ಯ ಬಸ್ ಗಳಲ್ಲಿ 241497 ಮಹಿಳಾ ಪ್ರಯಾಣಿಕರು ಸಂಚರಿಸಿ 4352614 ರೂ, ಆದಾಯ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 5,48,975 ಮಹಿಳಾ ಪ್ರಯಾಣಿಕರು ಸಂಚರಿಸಿ 2,03,52,762 ರೂ ಆದಾಯ ಸಾರಿಗೆ ನಿಗಮಕ್ಕೆ ಬಂದಿದೆ.

ಜುಲೈ 14 ರ ವರೆಗೆ ಉಡುಪಿ ಘಟಕದಲ್ಲಿ ಒಟ್ಟು 1,92,641 ಮಹಿಳೆಯರು ಸಂಚರಿಸಿದ್ದು, 78,40,072 ರೂ ಆದಾಯ, ಕುಂದಾಪುರ ಘಟಕದಲ್ಲಿ 2,29,557 ಮಹಿಳೆಯರು ಸಂಚರಿಸಿದ್ದು, 80,88,362 ರೂ ಆದಾಯ ಗಳಿಕೆಯಾಗುವ ಮೂಲಕ ಯೋಜನೆ ಜಾರಿಗೆಯಾದಾಗಿನಿಂದ ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 9.71 ಲಕ್ಷ ಮಹಿಳಾ ಪ್ರಯಾಣಿಕರು ಸಂಚರಿಸಿದ್ದು, ಸಾರಿಗೆ ಸಂಸ್ಥೆಗೆ 3.62 ಕೋಟಿ ರೂ ಆದಾಯ ಬಂದಿದೆ. ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಾಬಲ್ಯವಿದ್ದರೂ ಸಹ ಶಕ್ತಿ ಯೋಜನೆಯ ನಂತರ ಮಹಿಳಾ ಪ್ರಯಾಣಿಕರು ಸರಕಾರಿ ಬಸ್ ಗಳಲ್ಲಿ ಸಂಚರಿಸಲು ಉತ್ಸಾಹ ತೋರುತ್ತಿದ್ದು, ಸರಕಾರದ ಯೋಜನೆಯ ಸಂಪೂರ್ಣ ಪ್ರಯೋಜನ ಪಡೆಯುತ್ತಿದ್ದಾರೆ. ಉಡುಪಿಯ ಘಟಕದಲ್ಲಿ 65 ಬಸ್ ಮತ್ತು ಕುಂದಾಪುರ ಘಟಕದ ಬಸ್ ಗಳು 68 ಬಸ್ ಗಳು ಶಕ್ತಿ ಯೋಜನೆಯಡಿ ಪ್ರತಿದಿನ ಸೇವೆ ನೀಡುತ್ತಿದ್ದು, ಪ್ರತಿದಿನ ಜಿಲ್ಲೆಯ ವಿವಿಧ ಕಡೆಗಳಿಲ್ಲಿ ಮತ್ತು ಜಿಲ್ಲೆಯ ಹೊರಗೆ ಹಲವಾರು ಟ್ರಿಪ್ ಸಂಚರಿಸುತ್ತಿವೆ. ವಾರಾಂತ್ಯದಲ್ಲಿ ಉಡುಪಿಯ ಶ್ರೀ ಕೃಷ್ಠ ಮಠ, ಮಲ್ಪೆ ಬೀಚ್ ಸೇರಿದಂತೆ ವಿವಿಧ ಪ್ರೇಕ್ಷಣೀಯ ಸ್ಥಳಗಳು ಮತ್ತು ಧಾರ್ಮಿಕ ಕ್ಷೇತ್ರಗಳಿಗೆ ಹೊರ ಜಿಲ್ಲೆಯಿಂದ ಹೆಚ್ಚಿನ ಮಹಿಳಾ ಪ್ರಯಾಣಿಕರು ಆಗಮಿಸುತ್ತಿದ್ದು, ಈ ಮೂಲಕ ಜಿಲ್ಲೆಯ ಪ್ರವಾಸೋದ್ಯಮ ಚಟುವಟಿಕೆಗಳಿಗೂ ಸಹ ಆದಾಯ ಬರುತ್ತಿದೆ.

 

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago