ಶಕ್ತಿ ಯೋಜನೆ – 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ – vishwanews24

Featured, ರಾಜ್ಯ ನ್ಯೂಸ್

ಶಕ್ತಿ ಯೋಜನೆ – 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ವಿತರಿಸಿದರು.

ಟಿಕೆಟ್‌ ವಿತರಿಸಿದ ನಂತರ ಮಾತನಾಡಿದ ಅವರು, 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿರುವ ಬಗ್ಗೆ ಮುಖ್ಯಮಂತ್ರಿ ವಿವರಿಸಿದರು.

ಶಿರಾಡಿಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು; ಅದೃಷ್ಟವಶಾತ್ ತಪ್ಪಿದ ಅನಾಹುತ – vishwanews24

ಕಾಂಗ್ರೆಸ್ ಸರ್ಕಾರವು ರಾಜ್ಯದ ಎಲ್ಲ ಮಹಿಳೆಯರಿಗೆ ರಾಜ್ಯದೊಳಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸುವ ನಿಟ್ಟಿನಲ್ಲಿ ‘ಶಕ್ತಿ’ ಯೋಜನೆಯನ್ನು 2023ರ ಜೂನ್ 11ರಿಂದ ಜಾರಿ ಮಾಡಿದೆ. ಈ ಯೋಜನೆಯಡಿಯಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ ಮತ್ತು ಎನ್‍ಡಬ್ಲ್ಯೂಆರ್‌ಟಿಸಿ ಸಾರಿಗೆ ಬಸ್‍ಗಳಲ್ಲಿ ಮಹಿಳೆಯರು ರಾಜ್ಯದೊಳಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ರಾಜ್ಯದ ಸಾರಿಗೆ ನಿಗಮಗಳ ಬಸ್‍ಗಳಲ್ಲಿ ಪ್ರತಿನಿತ್ಯ ಸುಮಾರು ಒಂದು ಕೋಟಿಗೂ ಅಧಿಕ ಮಂದಿ ಪ್ರಯಾಣಿಸುತ್ತಾರೆ. ಅದರಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ 80 ಲಕ್ಷ ಇದ್ದು, ‘ಶಕ್ತಿ ಯೋಜನೆ’ಯಡಿ ಪ್ರತಿನಿತ್ಯ 20 ಕೋಟಿ ರೂ.ಗಳಷ್ಟು ಉಚಿತ ಟಿಕೆಟ್ ಅನ್ನು ಮಹಿಳೆಯರಿಗೆ ವಿತರಿಸಲಾಗುತ್ತಿದೆ.

ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ನಿಧನ – vishwanews24

Leave a Reply