ಟಿಕೆಟ್ ವಿತರಿಸಿದ ನಂತರ ಮಾತನಾಡಿದ ಅವರು, 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿರುವ ಬಗ್ಗೆ ಮುಖ್ಯಮಂತ್ರಿ ವಿವರಿಸಿದರು.
ಕಾಂಗ್ರೆಸ್ ಸರ್ಕಾರವು ರಾಜ್ಯದ ಎಲ್ಲ ಮಹಿಳೆಯರಿಗೆ ರಾಜ್ಯದೊಳಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸುವ ನಿಟ್ಟಿನಲ್ಲಿ ‘ಶಕ್ತಿ’ ಯೋಜನೆಯನ್ನು 2023ರ ಜೂನ್ 11ರಿಂದ ಜಾರಿ ಮಾಡಿದೆ. ಈ ಯೋಜನೆಯಡಿಯಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ ಮತ್ತು ಎನ್‍ಡಬ್ಲ್ಯೂಆರ್‌ಟಿಸಿ ಸಾರಿಗೆ ಬಸ್‍ಗಳಲ್ಲಿ ಮಹಿಳೆಯರು ರಾಜ್ಯದೊಳಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ರಾಜ್ಯದ ಸಾರಿಗೆ ನಿಗಮಗಳ ಬಸ್‍ಗಳಲ್ಲಿ ಪ್ರತಿನಿತ್ಯ ಸುಮಾರು ಒಂದು ಕೋಟಿಗೂ ಅಧಿಕ ಮಂದಿ ಪ್ರಯಾಣಿಸುತ್ತಾರೆ. ಅದರಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ 80 ಲಕ್ಷ ಇದ್ದು, ‘ಶಕ್ತಿ ಯೋಜನೆ’ಯಡಿ ಪ್ರತಿನಿತ್ಯ 20 ಕೋಟಿ ರೂ.ಗಳಷ್ಟು ಉಚಿತ ಟಿಕೆಟ್ ಅನ್ನು ಮಹಿಳೆಯರಿಗೆ ವಿತರಿಸಲಾಗುತ್ತಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…