ಮೈಸೂರು : ”ಶತಮಾನಗಳ ಇತಿಹಾಸವಿರುವ ಕಾಂಗ್ರೆಸ್ ಜನ ಪ್ರಿಯತೆ ಪಡೆಯಬೇಕಾದರೆ ಹಿಂದೂತ್ವವನ್ನು ಒಪ್ಪಿಕೊಳ್ಳಬೇಕು” ಎಂದು ಕಾಂಗ್ರೆಸ್ ಪಕ್ಷದ ಮುಖಂಡ, ವಿಧಾನಪರಿಷತ್ ಸದಸ್ಯ ಆರ್ ಧರ್ಮಸೇನಾ ಹೇಳಿದ್ದಾರೆ.
ಕ್ವಿಟ್ ಇಂಡಿಯಾ ಚಳವಳಿಯ ವರ್ಷದ ಅಂಗವಾಗಿ ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ವರ್ಷಾಚರಣೆಯಲ್ಲಿ ಮಾತನಾಡಿದ ಅವರು, ”ಕಾಂಗ್ರೆಸ್ ಬದಲಾಗಬೇಕಿದೆ. ಶತಮಾನಗಳ ಇತಿಹಾಸವಿರುವ ಕಾಂಗ್ರೆಸ್ ಈಗೀನ ಕಾಲದಲ್ಲಿ ಜನಪ್ರಿಯತೆ ಗಳಿಸಬೇಕಾದರೆ ಹಿಂದೂತ್ವವನ್ನು ಒಪ್ಪಿಕೊಳ್ಳಬೇಕು” ಎಂದು ಹೇಳಿದರು.
”ಕಾಂಗ್ರೆಸ್ ಹಿಂದೂಗಳ ಹಿತದೃಷ್ಟಿಯಿಂದ ಬಹಳಷ್ಟು ಕೊಡುಗೆ ನೀಡಿದೆ. ನಾವು ಮಾಜಿ ಮಾಜಿ ಕೇಂದ್ರ ಸಚಿವ ಬಾಬು ಜಗಜೀವನ ರಾಮ್ ಮತಾಂತರವಾಗುವುದನ್ನು ತಡೆದಿದ್ದೆವು. ಪಕ್ಷ ಹಿಂದೂಗಳ ಹಿತದೃಷ್ಟಿಗಾಗಿ ನೀಡಿರುವ ಕೊಡುಗೆ ನೆನಪಿಸಲು ಹಿಂದೂ ಕೋಶವೊಂದನ್ನು ಸ್ಥಾಪಿಸಬೇಕಾಗಿದೆ” ಎಂದರು.
”ಹಾಗೆಯೇ ಪ್ರತಿ 10 ವರ್ಷಗಳಿಗೊಮ್ಮೆ ರಾಜಕೀಯ ಪರಿಸ್ಥಿತಿ ಬದಲಾವಣಿಯಾಗಲಿದ್ದು ಜನಸಂಘ ಮೊದಲಾದ ಕಾರಣದಿಂದ ಬಿಜೆಪಿ ಹೆಚ್ಚು ಪ್ರಬಲವಾಗಿದೆ. ಎಲ್ಲಾ ಪಕ್ಷಗಳಿಗೂ ಬದಲಾವಣೆ ಅನಿವಾರ್ಯ. ನಾವು ಕೂಡಾ ಬದಲಾವಣೆಯಾಗಬೇಕು” ಎಂದು ಅಭಿಪ್ರಾಯಪಟ್ಟರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…