ಬೆಂಗಳೂರು : ಕೊರೋನಾದಿಂದಾಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಐತಿಹಾಸಿಕ ಅಯೋಧ್ಯೆ ರಾಮ ಮಂದಿರ ನಿರ್ಮಾಣ ಶಿಲಾನ್ಯಾಸದ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
ಶತಮಾನಗಳ ನಂತರ ಮತ್ತೆ ಅಯೋಧ್ಯೆಯಲ್ಲಿ ಶ್ರೀರಾಮ ಪಟ್ಟಾಭಿಷೇಕ ನಡೆಯಲಿದೆ. ಸರ್ವೋಚ್ಛ ನ್ಯಾಯಾಲಯದ ತೀರ್ಪಿನನ್ವಯ ಭಾರತೀಯರ ಪರಮ ಪವಿತ್ರ ಶ್ರದ್ಧಾಕೇಂದ್ರ ಅಯೋಧ್ಯೆಯಲ್ಲಿ ಭವ್ಯವಾದ ಶ್ರೀರಾಮ ಮಂದಿರ ನಿರ್ಮಾಣವಾಗಲಿದ್ದು, ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಂದಿರಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ
ಅಗಣಿತ ಸಾಧು-ಸಂತರ, ಶ್ರದ್ಧಾಳುಗಳ ತಪಸ್ಸು, ಪರಿಶ್ರಮ, ಬಲಿದಾನ, ಪ್ರಾರ್ಥನೆಗಳು ಸಾಕಾರಗೊಳ್ಳುವ ಸಮಯ ಬಂದಿದೆ. ಜನಾಂದೋಲನಗಳಲ್ಲಿ ಪಾಲ್ಗೊಂಡು, ಅನೇಕ ರೀತಿಯ ಸವಾಲುಗಳನ್ನು ಎದುರಿಸಿ, ಹೋರಾಟಗಳನ್ನು ಮಾಡಿದ ಪಕ್ಷದ ಎಲ್ಲ ನಾಯಕರು, ಕಾರ್ಯಕರ್ತರ ಪ್ರಯತ್ನಗಳನ್ನು ಸ್ಮರಿಸುತ್ತಾ, ಈ ಹೆಮ್ಮೆಯ ಐತಿಹಾಸಿಕ ಕ್ಷಣವನ್ನು ಸ್ವಾಗತಿಸೋಣ ಎಂದು ಟ್ವೀಟ್ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…