ರಾಷ್ಟ್ರ ನ್ಯೂಸ್

ಶಬರಿಮಲೆಗೆ ಮಹಿಳೆಯರ ಪ್ರವೇಶ : ದೇಗುಲ ಪ್ರವೇಶಕ್ಕೆ ಇರುವ ಹಳೆಯ ಸಂಪ್ರದಾಯದಲ್ಲಿ ಯಾರೋಬ್ಬರೂ ಹಸ್ತಕ್ಷೇಪ ಮಾಡಬಾರದು :ಸೂಪರ್‌ ಸ್ಟಾರ್‌ ರಜನಿಕಾಂತ್

ಚೆನ್ನೈ: ಮಹಿಳೆಯರಿಗೆ ಶಬರಿಮಲೆ ದೇಗುಲ ಪ್ರವೇಶಕ್ಕೆ ಇರುವ ವಯಸ್ಸಿನ ಮಿತಿಯ ಹಳೆಯ ಸಂಪ್ರದಾಯದಲ್ಲಿ ಯಾರೋಬ್ಬರೂ ಹಸ್ತಕ್ಷೇಪ ಮಾಡಬಾರದೆಂದು ಸೂಪರ್ ಸ್ಟಾರ್ ರಜನಿಕಾಂತ್ ಅಭಿಪ್ರಾಯಪಟ್ಟಿದ್ದಾರೆ.

ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅವಕಾಶ ಕಲ್ಪಿಸಿಕೊಟ್ಟಿದ್ದರ ಬಗ್ಗೆ ಇದೇ ಮೊದಲ ಬಾರಿಗೆ ನಟ ರಜನಿಕಾಂತ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಅನಾದಿಕಾಲದಿಂದಲೂ ನಮ್ಮ ಸಮಾಜದಲ್ಲಿ ಆಚರಣೆಗಳನ್ನು ನಾವು ಕಟ್ಟುನಿಟ್ಟಾಗಿ ನಡೆಸಿಕೊಂಡು ಬಂದಿದ್ದೇವೆ. ಹೀಗಾಗಿ ಅವುಗಳನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ ಎಂದು ತಿಳಿಸಿದರು.

ನಮ್ಮ ದೇಶದಲ್ಲಿರುವ ಪ್ರತಿಯೊಂದು ದೇವಾಲಗಳು ಸಹ, ತನ್ನದೇ ಆದ ರೂಢಿ-ಸಂಪ್ರದಾಯಗಳನ್ನು ಬೆಳೆಸಿಕೊಂಡು ಬಂದಿರುತ್ತವೆ. ವಿಶೇಷವಾಗಿ ಸ್ವಾಮಿ ಶಬರಿಮಲೆ ಅಯ್ಯಪ್ಪ ದೇಗುಲ ವಿಚಾರದಲ್ಲಿಯೂ ಸಹ ಅನೇಕ ಸಂಪ್ರದಾಯಗಳು ರೂಢಿಯಲ್ಲಿವೆ. ಹೀಗಾಗಿ ಶಬರಿಮಲ ದೇವಾಲಯಕ್ಕೆ ಮಹಿಳೆಯರ ಪ್ರವೇಶದ ವಯಸ್ಸಿನ ವಿಚಾರಕ್ಕೆ ವಿಧಿಸಿರುವ ಹಳೆಯ ಸಂಪ್ರದಾಯದಲ್ಲಿ ಯಾರೋಬ್ಬರು ಸಹ ಹಸ್ತಕ್ಷೇಪ ಮಾಡಬಾರದೆಂಬುದು ನನ್ನ ಮನವಿ ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

ಶಬರಿಮಲೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ತಲೆ ಬಾಗುತ್ತೇನೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ನಾನು ಸುಪ್ರೀಂ ಕೋರ್ಟ್ ಆದೇಶವನ್ನು ಗೌರವಿಸುತ್ತೇನೆ. ಆದರೆ ಇದು ಧರ್ಮ ಹಾಗೂ ಅದಕ್ಕೆ ಸಂಬಂಧಪಟ್ಟ ಆಚರಣೆಗಳ ವಿಷಯಕ್ಕೆ ಬಂದಾಗ ಎಲ್ಲರೂ ಎಚ್ಚರ ವಹಹಿಸಬೇಕಾಗುತ್ತದೆ ಎಂದು ಸ್ಪಷ್ಟನೆ ನೀಡಿದರು..

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago