ಶಾರ್ಜಾ:ಮಹಿಳೆಯರಿಗೆ ದೇವರನ್ನು ನೋಡಲು, ಪೂಜೆ ಮಾಡುವ ಅವಕಾಶ ನೀಡದ ಎಲ್ಲಾ ಧರ್ಮವನ್ನು ತಾನು ಗೌರವಿಸುವುದಿಲ್ಲ. ಮಹಿಳೆಯರನ್ನು ನೋಡದ ದೇವರು ತನಗೆ ದೇವರೇ ಅಲ್ಲ ಎಂದು ನಟ ಪ್ರಕಾಶ್ ರೈ ಶಬರಿಮಲೆಗೆ ಮಹಿಳೆಯರ ಪ್ರವೇಶದ ವಿಷಯ ಕುರಿತಂತೆ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.
ಮಹಿಳೆಯರನ್ನು ನೋಡದ ದೇವರು ದೇವರೇ ಅಲ್ಲ ಎಂದು ಹೇಳುವ ಮೂಲಕ ನಟ ಪ್ರಕಾಶ್ ರೈ ವಿವಾದದ ಸುಳಿಯಲ್ಲಿ ಸಿಲುಕೊಂಡಿದ್ದಾರೆ
ಮಹಿಳೆಯರಿಗೆ ಪೂಜೆ ಮಾಡಲು ಅವಕಾಶ ನೀಡದ ದೇವರು ಮತ್ತು ಭಕ್ತರನ್ನು ತಾನು ನಂಬುವುದಿಲ್ಲ. ಎಲ್ಲರೂ ಜನಿಸುವುದು ಹೆಣ್ಣಿನಿಂದಲೇ. ಹೀಗಾಗಿ ಮಹಿಳೆಗೆ ಪ್ರವೇಶಿಸುವ ಅವಕಾಶವನ್ನು ನಿರ್ಬಂಧಿಸಿದರೆ ಅದು ದೇವರು ಆಕೆಯ ಹಕ್ಕನ್ನು ಉಲ್ಲಂಘಿಸಿದಂತೆ ಎಂದು ಹೇಳಿದರು.
ಯಾವ ಭಕ್ತರು ಸ್ತ್ರೀಯರಿಗೆ ದೇವರ ದರ್ಶನಕ್ಕೆ ಅವಕಾಶ ಕೊಡುವುದಿಲ್ಲವೋ ಅವರು ಭಕ್ತರೇ ಅಲ್ಲ. ಯಾವ ದೇವರು ಮಹಿಳೆಯನ್ನು ನೋಡೋದಿಲ್ಲವೋ ಅದು ದೇವರೇ ಅಲ್ಲ. ಮಹಿಳೆಯರಿಗೆ ಶಬರಿಮಲೆ ದೇಗುಲ ಪ್ರವೇಶಕ್ಕೆ, ದೇವರ ದರ್ಶನಕ್ಕೆ ಅವಕಾಶ ಕೊಡಲೇಬೇಕು. ಮಹಿಳೆಯರನ್ನು ತಡೆಯುವ ಹಕ್ಕು ಯಾರಿಗೂ ಇಲ್ಲ ಅಂತಾ ಹೇಳಿದ್ದಾರೆ.
ಶಾರ್ಜಾದ ಅಂತಾರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಮಾತನಾಡಿದ ಅವರು, ಭೂಮಿಯನ್ನು ಹೆಣ್ಣಿಗೆ ಹೋಲಿಸುತ್ತೇವೆ, ಹೆಣ್ಣು ಅಂದ್ರೆ ತಾಯಿ, ಹೆಣ್ಣಿಗೆ ಅಪಾರವಾದ ಗೌರವ ಕೊಡುವ ಸಂಸ್ಕೃತಿಯಲ್ಲಿ ದೇವರನ್ನು ನೋಡುವುದು ಮತ್ತು ಪೂಜಿಸುವ ಹಕ್ಕನ್ನು ನಿರ್ಬಂಧಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…